ನವದೆಹಲಿ: ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಬರಾಕ್ ಒಬಾಮ ಭೇಟಿಯ ವೇಳೆ ಕೆಲ ಭಯೋತ್ಪಾದಕ ಸಂಘಟನೆಗಳು ದಾಳಿ ಮಾಡುವ ಕುರಿತು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಮಧ್ಯೆ ಗಣರಾಜ್ಯೋತ್ಸವದ ದಿನದಂದು ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಜನವರಿ 26 ರ ಗಣರಾಜ್ಯೋತ್ಸವಕ್ಕೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಮುಖ್ಯ ಅಥಿತಿಯಾಗಿ ಭಾಗವಹಿಸಲಿದ್ದಾರೆ. ಬರಾಕ್ ಆಗಮನದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಉಗ್ರ ಸಂಘಟನೆಯಾದ ಲಷ್ಕರ್ ಏ ತೊಯ್ಬಾ ದಾಳಿ ನಡೆಸುವ ಕುರಿತು ಕೇಂದ್ರ ಗುಪ್ತಚರ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ ದಿನದಂದು ದೆಹಲಿಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಗಣರಾಜ್ಯೋತ್ಸವದ ಸಮಾರಂಭಕ್ಕೆ ಬರಾಕ್ ಒಬಾಮ ಅವರನ್ನು ಮುಖ್ಯ ಅತಿಥಿಯಾಗಿ ಭಾರತ ಆಹ್ವಾನಿಸಿದ್ದು, ಭಾರತಕ್ಕೆ ಆಗಮಿಸುವ ಕುರಿತು ಬರಾಕ್ ಒಬಾಮ ಒಪ್ಪಿಗೆ ಸೂಚಿಸಿದ್ದರು.