ದೇಶ

ಜಮ್ಮು ಕಾಶ್ಮೀರದಾದ್ಯಂತ ಹೈಅಲರ್ಟ್ ಘೋಷಣೆ

Vishwanath S

ನವದೆಹಲಿ: ಭಯೋತ್ಪಾದಕರು ದಾಳಿ ನಡೆಸುವ ಭೀತಿ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ರಾಜ್ಯಾದ್ಯಾಂತ ಹೈಅಲರ್ಟ್ ಘೋಷಿಸಲಾಗಿದೆ.

ನಿನ್ನೆ ಜಮ್ಮು ಮತ್ತು ಕಾಶ್ಮೀರದ ವಿವಿಧೆಡೆ ಭಯೋತ್ಪಾದಕರು ಗುಂಡಿನ ದಾಳಿ ಹಾಗೂ ಆತ್ಮಾಹುತಿ ಬಾಂಬ್ ದಾಳಿ ನಡೆಸಿ 11 ಯೋಧರು ಸೇರಿದಂತೆ 21 ಮಂದಿಯ ಸಾವಿಗೆ ಕಾರಣರಾಗದ್ದರು. ಮತ್ತೆ ಜಮ್ಮು ಮತ್ತು ಕಾಶ್ಮೀರದಲ್ಲಿ ದಾಳಿ ನಡೆಸುವ ಭೀತಿ ಹಿನ್ನೆಲೆಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

ಅಲ್ಲದೆ ಜಮ್ಮು ಮತ್ತು ಕಾಶ್ಮೀರಕ್ಕೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ ಅವರ ರ್ಯಾಲಿ ಹಿನ್ನೆಲೆಯಲ್ಲಿ ದೇಶದೊಳಗೆ ಉಗ್ರರು ನುಸುಳು ಸಾಧ್ಯತೆಗಳಿದ್ದು, ಗಡಿಯಲ್ಲಿ ಕಟ್ಟೇಚ್ಚರ ವಹಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಬಂದು ಹೋಗುವ ವಾಹನಗಳ ಮೇಲೆ ನಿಗಾವಹಿಸುವ ಸಲುವಾಗಿ ರಾಜ್ಯಾದ್ಯಾಂತ ಹೆಚ್ಚಿನ ಚೆಕ್‌ಪೋಸ್ಟ್‌ಗಳನ್ನು ಸ್ಥಾಪನೆ ಮಾಡಲಾಗುತ್ತದೆ.

ಮತ್ತೊಂದೆಡೆ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ದೇಶಾದ್ಯಂತ ವಿದ್ವಂಸಕ ಕೃತ್ಯಗಳನ್ನು ಎಸಗಲು ಭಯೋತ್ಪಾದಕರು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿಯನ್ನು ಕೇಂದ್ರ ಗುಪ್ತಚರ ಇಲಾಖೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

SCROLL FOR NEXT