ದೇಶ

ನೇಪಾಳದಲ್ಲಿ ಕಂದಕಕ್ಕೆ ಉರುಳಿದ ಬಸ್: 17 ಸಾವು

Vishwanath S

ಕಠ್ಮಂಡು: ನಿಗದಿಗಿಂತ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಕಳೆದ ರಾತ್ರಿ ನೇಪಾಳದ ಪೋಖಾರಾಕಾಡ ಎಂಬ ಗ್ರಾಮದ ಬಳಿ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಸುಮಾರು ಎರಡು ಸಾವಿರ ಅಡಿಗಳ ಆಳ ಪ್ರಪಾತಕ್ಕೆ ಉರುಳಿ ಬಿದ್ದಿದ್ದು, ಈ ದುರಂತದಲ್ಲಿ 17 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಪ್ರಯಾಣಿಗರಿಗೆ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿ ಕೇಶ್ ಬಹದೂರ್ ಶಹೀ ಹೇಳಿದ್ದಾರೆ.

ಇಲ್ಲಿಯವರೆಗೂ 15 ಮಂದಿ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಇನ್ನುಳಿದಂತೆ ಮೂವರ ಮೃತದೇಹ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಕೇಶ ಬಹದೂರ್ ಶಹೀ ಹೇಳಿದ್ದಾರೆ.

ನೇಪಾಳದ ರಾಜಧಾನಿ ಕಠ್ಮಂಡುವಿನಿಂದ ಸುಮಾರು 400 ಕಿ.ಮೀ ದೂರದ ಗುಡ್ಡಗಾಡು ಪ್ರದೇಶದ ಇಕ್ಕಟ್ಟಾದ ಕಣಿವೆ ರಸ್ತೆಯಲ್ಲಿ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದೆ. 38 ಸೀಟುಗಳೊಳಗೊಂಡಿದ್ದ ಬಸ್ಸ್‌ನಲ್ಲಿ 67 ಮಂದಿ ಪ್ರಯಾಣಿಸುತ್ತಿದ್ದರು. ನಿಗದಿತ ಸೀಟ್‌ಗಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿದ್ದೆ ದುರಂತಕ್ಕೆ ಕಾರಣ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾತ್ರಿ ಇಡಿ ಕಾರ್ಯಾಚರಣೆ ನಡೆಸಿ ರಕ್ಷಣ ಸಿಬ್ಬಂದಿಗಳು ದುರಂತದಲ್ಲಿ ಗಾಯಗೊಂಡವರನ್ನು ಹಾಗೂ ಮೃತದೇಹಳನ್ನು ಮೇಲಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.

SCROLL FOR NEXT