ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ. 
ದೇಶ

ನಿಮ್ಮ ಮತ ಬುಲೆಟ್‌ಗಿಂತಲೂ ಶಕ್ತಿಶಾಲಿ: ಪ್ರಧಾನಿ ಮೋದಿ

ಮತದಾನ ಬುಲೆಟ್‌ಗಿಂತಲೂ ಶಕ್ತಿಶಾಲಿ ಎಂದು ಪ್ರಧಾನಿ ನರೇಂದ್ರ ಮೋದಿ...

ಸಾಂಬಾ: ಮತದಾನ ಬುಲೆಟ್‌ಗಿಂತಲೂ ಶಕ್ತಿಶಾಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ಎಲೆಕ್ಟ್ರಾನಿಕ್ ಮತಯಂತ್ರ(ಇವಿಎಂ)ದ ಮೇಲೆ ಒಂದು ಬೆರಳು ಒತ್ತುವುದು ಎಕೆ-47ಗಿಂತ ಶಕ್ತಿಶಾಲಿಯಾದದು ಎಂದು ಮೋದಿ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಒಂದು ವಾರದಿಂದ ಉಗ್ರರು ದಾಳಿ ನಡೆಸುತ್ತಿದ್ದರೂ ಹಿಂಜಯರಿದ ಪ್ರಧಾನಿ ಮೋದಿ ಇಂದು ಶ್ರೀನಗರಕ್ಕೆ ಭೇಟಿ ನೀಡಿದ್ದಾರೆ.

ಶ್ರೀನಗರದ ಶೇರ್-ಎ-ಕಾಶ್ಮೀರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಎಕೆ-47 ಬಳಕೆಗಿಂತ ಅತ್ಯಂತ ಪ್ರವಾಭವಾದದ್ದು ಮತ ಚಲಾವಣೆ. ಇದರಿಂದ ಕೆಟ್ಟದನ್ನು ಧ್ವಂಸಗೊಳಿಸಬಹುದು ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸುವ ಮೂಲಕ ಉತ್ತಮ ಆಡಳಿತ ಆಯ್ಕೆ ಮಾಡಿ. ಆಗ ಇಲ್ಲಿರುವಂತಹ ಕೆಟ್ಟತನವನ್ನು ಮಟ್ಟಹಾಕಬಹುದು ಎಂದು ಅವರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯೇ ನನ್ನ ಗುರಿಯಾಗಿದೆ. ಇಲ್ಲಿನ ಜನತೆ ನನ್ನ ಮೇಲೆ ಭರವಸೆ ಇಟ್ಟಿದ್ದಾರೆ. ಅದನ್ನು ನಾನು ಎಂದಿಗೂ ಹುಸಿಗೊಳಿಸುವುದಿಲ್ಲ. ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ನಮ್ಮ ಸರ್ಕಾರ ಒತ್ತು ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಅಪ್ಪ-ಮಗಳು ಜಮ್ಮು ಕಾಶ್ಮೀರದಲ್ಲಿ ಆಡಳಿತ ನಡೆಸಿದರು. ಆದರೆ ಯಾವುದೇ ರೀತಿಯಲ್ಲಿ ಪ್ರಯೋಜನವಾಗಿಲ್ಲ. ಸಮಸ್ಯೆಗಳು ಹೆಚ್ಚಾಗುತ್ತಾ ಹೋದವು. ಈಗ ಆಡಳಿತವನ್ನು ಬದಲಾಯಿಸುವ ಸಮಯ ಬಂದಿದೆ. ಆಡಳಿತವನ್ನು ಬದಲಿಸಿ, ಇಲ್ಲಿನ ಸಮಸ್ಯೆಯಿಂದ ಹೊರಬರಲು ಮುಂದಾಗಿ ಎಂದು ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!