ಒಮರ್ ಅಬ್ದುಲ್ಲಾ 
ದೇಶ

ಮೋದಿ ರ್ಯಾಲಿಗೆ ಜನರ ಪೂರೈಕೆ: ಒಮರ್ ಅಬ್ದುಲ್ಲಾ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ರಾಜಕೀಯ ಪಕ್ಷಗಳ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದೆ. ಪ್ರಧಾನಿ ನರೇಂದ್ರ ಮೋದಿ ರ್ಯಾಲಿಗೆ ರಾಜ್ಯದ ಬೇರೆ ಕಡೆಗಳಿಂದ ಜನರನ್ನು ಕರೆತರಲಾಗಿದೆ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ.

ಇಂದು ಶ್ರೀನಗರದ ಶೇರ್-ಎ-ಕಾಶ್ಮೀರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೋದಿ ಅವರ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿದ್ದವರು ಯಾರು ಬಿಜೆಪಿ ಬೆಂಬಲಿಗರಲ್ಲ ಅವರನ್ನು ಬನಿಹಾಲ್ ಹಾಗೂ ಜಮ್ಮುವಿನಿಂದ ಎರಡು ರೈಲುಗಳಲ್ಲಿ ಕರೆದು ತರಲಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ಒಮರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

ಸ್ಟೇಡಿಯಂಗೆ ಹೋಗುತ್ತಿರುವವರ ಕೈಯಲ್ಲಿ ಅಥವಾ ವಾಹನಗಳಲ್ಲಿ ಬಿಜೆಪಿಯ ಧ್ವಜವಾಗಲಿ ಅಥವಾ ಬ್ಯಾನರ್ ಆಗಲಿ ಯಾವುದು ಇಲ್ಲ. ಇದು ಕೇವಲ ಬಿಜೆಪಿಯ ಬೆಂಬಲವೆಷ್ಟಿದೆ ಎಂಬುದನ್ನು ತೋರಿಸುತ್ತದೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಲೇವಡಿ ಮಾಡಿದ್ದಾರೆ.

ಕಾಶ್ಮೀರದಲ್ಲಿ ಮೈತ್ರಿ ಸರ್ಕಾರದ ಪಾಲುದಾರವಾಗಿದ್ದ ಕಾಂಗ್ರೆಸ್ ವಿರುದ್ಧವೂ ಕಿಡಿಕಾರಿರುವ ಒಮರ್, ಬಿಜೆಪಿ ಸಮಾವೇಶಕ್ಕೆ ಜನರನ್ನು ಒದಗಿಸುವಂತೆ ಕಾಂಗ್ರೆಸ್ ಬೆಂಬಲಿತ ಮುಖಂಡರಿಗೆ ಕೂಡ ಸೂಚಿಸಲಾಗಿದೆ. ರಾಜಕೀಯವು ಎಂಥವರನ್ನೂ ಒಗ್ಗೂಡಿಸುತ್ತದೆ ಎಂದು ಒಮರ್ ಅಬ್ದುಲ್ಲಾ ಟೀಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ