ವೈಕೋ (ಸಂಗ್ರಹ ಚಿತ್ರ) 
ದೇಶ

ಎನ್‌ಡಿಎದಿಂದ ಹೊರನಡೆದ ಎಂಡಿಎಂಕೆ

ಚೆನ್ನೈ: ವೈಕೋ ನೇತೃತ್ವದ ಎಂಡಿಎಂಕೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ಹೊರ ಬಂದಿದೆ ಎಂದು ಸೋಮವಾರ ವರದಿಗಳು ತಿಳಿಸಿವೆ.

ಕಳೆದ ಲೋಕಸಭೆ ಚುನಾವಣೆ ವೇಳೆ ಎನ್‌ಡಿಎ ಮೈತ್ರಿಕೂಟ ಸೇರಿದ್ದ ಎಂಡಿಎಂಕೆ, ಇಂದು ಜಿಲ್ಲಾ ಕಾರ್ಯದರ್ಶಿಗಳ ಸಭೆ ನಡೆಸಿ ಎನ್‌ಡಿಎ ಮೈತ್ರಿಕೂಟದಿಂದ ಹೊರ ಬರುವ ನಿರ್ಣಯ ಕೈಗೊಂಡಿದೆ. ಅಲ್ಲದೆ ಭಾರತ, ಶ್ರೀಲಂಕಾಗೆ ಬೆಂಬಲ ನೀಡಬಾರದು ಎಂದು ಒತ್ತಾಯಿಸಿದೆ. ಪಕ್ಷದ ಮುಖ್ಯಸ್ಥ ವೈಕೋ ಅವರು ನಿರ್ಣಯವನ್ನು ಮಂಡಿಸಿದರು.

ಇದೇ ವೇಳೆ ಶ್ರೀಲಂಕಾ ತಮಿಳರ ವಿಷಯಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ಸರ್ಕಾರ ತಮಿಳರಿಗೆ ಮೋಸ ಮಾಡಿದೆ ಮತ್ತು ಕೇಂದ್ರ ಸರ್ಕಾರ ತಮಿಳು ವಿರೋಧಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವೈಕೋ ಆರೋಪಿಸಿದ್ದಾರೆ.

ಎಲ್‌ಟಿಟಿಇ ಬೆಂಬಲಿಸುವ ವೈಕೋ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಲಂಕಾ ಅಧ್ಯಕ್ಷ ಮಹಿಂದ್ ರಾಜಪಕ್ಷ ಅವರೊಂದಿಗೆ ಸಂಬಂಧ ವೃದ್ಧಿಗೆ ಯತ್ನಿಸಿದ್ದು ತೀವ್ರ ಬೇಸರ ತಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!