ದೇಶ

3ನೇ ಹಂತ: ಜಾರ್ಖಂಡ್, ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿಯುತ ಮತದಾನ

Lingaraj Badiger

ರಾಂಚಿ/ಶ್ರೀನಗರ: ಭಾರಿ ಭದ್ರತೆಯೊಂದಿಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಜಾರ್ಖಂಡ್ನಲ್ಲಿ ಮಂಗಳವಾರ ಮೂರನೇ ಹಂತದ ಮತದಾನ ಆರಂಭವಾಗಿದ್ದು, ಕೆಲವು ಸಣ್ಣಪುಟ್ಟ ಹಿಂಸಾಚಾರ ಘಟನೆಗಳನ್ನು ಹೊರತುಪಡಿಸಿದರೆ ಮತದಾನ ಬಹುತೇಕ ಶಾಂತಿಯುತವಾಗಿ ನಡೆಯುತ್ತಿದೆ.

ಕಣಿವೆ ರಾಜ್ಯದಲ್ಲಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೇರಿದಂತೆ 144 ಅಭ್ಯರ್ಥಿಗಳು ಕಣದಲ್ಲಿದ್ದು, ಬದ್ಗಾಂ, ಪುಲ್ವಾಮಾ ಮತ್ತು ಬಾರಾಮುಲ್ಲಾ ಜಿಲ್ಲೆಯ 16 ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಇನ್ನು ಜಾರ್ಖಂಡ್ನಲ್ಲೂ 17 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ಬಾರಾಮುಲ್ಲಾ ಜಿಲ್ಲೆಯ ಗುಲ್ಮಾರ್ಗ್ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಪೆಟ್ರೋಲ್ ಬಾಂಬ್ ಎಸೆದದನ್ನು ಹೊರತು ಪಡಿಸಿದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮತದಾನ ಬಹುತೇಕ ಶಾಂತಿಯುತವಾಗಿ ನಡೆಯುತ್ತಿದೆ.

ಚುನಾವಣಾ ಆಯೋಗದ ಅಧಿಕಾರಿಗಳ ಪ್ರಕಾರ, ಬೆಳಗ್ಗೆ 11 ಗಂಟೆಯವರೆಗೆ ಜಾರ್ಖಂಡ್ನಲ್ಲಿ ಶೇ.30ರಷ್ಟು ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ.15ರಷ್ಟು ಮತದಾನವಾಗಿದೆ.

SCROLL FOR NEXT