ನವದೆಹಲಿ: ವಿದೇಶಗಳಲ್ಲಿ ಗೌಪ್ಯವಾಗಿ ಇಡಲಾಗಿರುವ ಕಪ್ಪು ಹಣ ವಾಪಸ್ಸಾತಿಗೆ ಪ್ರಯತ್ನಗಳು ನಡೆಯುತ್ತಿದ್ದು, ಜಾರಿ ವ್ಯವಸ್ಥೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಕಾನೂನು ಚೌಕಟ್ಟು ರೂಪಿಸುವ ಕಾರ್ಯ ನಡೆಯುತ್ತಿದೆ ಎಂದು ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಲೋಕಸಭೆಗೆ ತಿಳಿಸಿದ್ದಾರೆ.
ಮಾಹಿತಿ ತಂತ್ರಜ್ಞಾನದ ಮೂಲಕ ವಿದೇಶದಲ್ಲಿ ಖಾತೆ ಹೊಂದಿರುವವರ ಮಾಹಿತಿ ಮತ್ತು ವಿವರ ಸಂಗ್ರಹಕ್ಕೆ ಸರ್ಕಾರ ಮುಂದಾಗಿದ್ದು, ಈ ಮೂಲಕ ಗಟ್ಟಿಯಾದ ಕಾನೂನು ಹಾಗೂ ಆಡಳಿತಾತ್ಮಕ ಚೌಕಟ್ಟು ರೂಪಿಸಲು ಜಾರಿ ಯಂತ್ರವನ್ನು ಸಜ್ಜುಗೊಳಿಸಲಾಗಿದೆ.
ಮಾಹಿತಿ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಮೂಲಕ ಕಪ್ಪು ಹಣ ಮಾಹಿತಿಯನ್ನೊಳಗೊಂಡ ಸಂಪೂರ್ಣ ವಿವರ ಸಂಗ್ರಹಕ್ಕೆ ಸೂಕ್ತ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಇದಲ್ಲದೇ, ವಿದೇಶಗಳಲ್ಲಿರುವ ಕಪ್ಪು ಹಣ ತರಲು ವಿಶೇಷ ತನಿಖಾ ತಂಡ ರಚಿಸಲಾಗಿದ್ದು, ಹೆಚ್ಚಿನ ಕ್ರಮಕ್ಕೆ ಕೇಂದ್ರ ಮುಂದಾಗಿದೆ ಎಂದು ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.