ಎಂ ವೆಂಕಯ್ಯ ನಾಯ್ಡು 
ದೇಶ

ಶೀಘ್ರದಲ್ಲೇ 3 ಕೋಟಿ ಜನರಿಗೆ ವಸತಿ: ವೆಂಕಯ್ಯ ನಾಯ್ಡು

ನವದೆಹಲಿ: ದೇಶದಲ್ಲಿ ಅಂದಾಜು 3 ಕೋಟಿ ಜನರಿಗೆ ವಸತಿ ಒದಗಿಸುವ ಹೊಸ ಯೋಜನೆಯೊಂದನ್ನು ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಲೋಕಸಭೆಯಲ್ಲಿ ಕೇಂದ್ರ ಸಚಿವ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.

ವಸತಿ ಯೋಜನೆ ಪ್ರಸ್ತಾಪವನ್ನು ಶೀಘ್ರದಲ್ಲೇ ಸಚಿವ ಸಂಪುಟ ಮುಂದೆ ಇರಿಸಲಾಗುವುದು ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ನಾಯ್ಡು ಅವರು ತಿಳಿಸಿದ್ದು, 2022ರ ವೇಳೆಗೆ ಎಲ್ಲರಿಗೂ ಮನೆ ಒದಗಿಸಲು ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ ಎಂದರು.

ನಗರ ಪ್ರದೇಶಗಳ ಬಡವರಿಗೆ ಮನೆ ಒದಗಿಸಲು ಖಾಸಗಿಯವರ ಜತೆಗೂಡಿ ಏಕೀಕೃತ ವಸತಿ ಯೋಜನೆಯನ್ನು ಜಾರಿಗೆ ತರಲಾಗುವುದು. ಖಾಸಗಿಯವರ ಪಾಲುದಾರಿಕೆಗೆ ರಾಜ್ಯ ಸರಕಾರಗಳೂ ಪ್ರೋತ್ಸಾಹ ನೀಡುವಂತೆ ಪ್ರೇರೇಪಿಸಲಾಗುವುದು. ತಮಿಳುನಾಡು, ಮಹಾರಾಷ್ಟ್ರ ಮತ್ತು ಗುಜರಾತ್‌ ಮಾದರಿಗಳನ್ನು ಅಧ್ಯಯನ ನಡೆಸಿದ ಬಳಿಕ ಕೊಳೆಗೇರಿಗಳ ಪುನರ್ವಸತಿ ಅಭಿವೃದ್ಧಿ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಪೂರಕ ಪ್ರಶ್ನೆಗೆ  ಉತ್ತರಿಸಿದರು.

ಚೆನ್ನೈನಂತಹ ನಗರಗಳಲ್ಲಿ ಕೊಳೆಗೇರಿ ಜನರಿಗಾಗಿ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸಿ ಪುನರ್ವಸತಿ ಕಲ್ಪಿಸುವ ತಮಿಳುನಾಡು ಸರಕಾರದ ಯೋಜನೆ ದೇಶಕ್ಕೆ ಮಾದರಿಯಾಗಿದೆ. ವಸತಿಹೀನರಿಗೆ ಚಳಿಗಾಲದಲ್ಲಿ ಬೆಚ್ಚಗಿನ ಆಶ್ರಯ ಒದಗಿಸುವಂತೆ ಸುಪ್ರೀಂ ಕೋರ್ಟ್‌ ನಿರ್ದೇಶನವನ್ನು ಪಾಲಿಸಲು ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಜತೆ ಸಭೆ ನಡೆಸಲಾಗುವುದು ಎಂದು ನಾಯ್ಡು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!