ಛಾಯ್‌ಬಾಸಾ ಕಾರಾಗೃಹ, ಜಾರ್ಖಂಡ್ 
ದೇಶ

ಜಾರ್ಖಂಡ್ ಕೈದಿಗಳ ಪರಾರಿ ಪ್ರಕರಣ: 14 ಅಧಿಕಾರಿಗಳು ಅಮಾನತು

ತಪ್ಪಿಸಿಕೊಂಡವರ ಬಂಧನಕ್ಕಾಗಿ ಜಿಲ್ಲಾದ್ಯಂತ ಕಟ್ಟೆಚ್ಚರ ಘೋಷಿಸಲಾಗಿದೆ...

ಜಾರ್ಖಂಡ್: ನಿನ್ನೆ ರಾಂಚಿ ಜೈಲಿನ 15 ವಿಚಾರಣಾಧೀನ ಕೈದಿಗಳು ತಪ್ಪಿಸಿಕೊಳ್ಳುವ ವೇಳೆ ಇಬ್ಬರು ಕೈದಿಗಳು ಪೊಲೀಸರ ಗುಂಡಿಗೆ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿ ಜೈಲು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ನಿನ್ನೆ ರಾಂಚಿ ಛಾಯ್‌ಬಾಸಾ ಜೈಲಿನ ಕುಖ್ಯಾತ ನಕ್ಸಲರು ಸೇರಿದಂತೆ 15 ಮಂದಿ ಪರಾರಿಯಾಗುವಲ್ಲಿ ಯಶಸ್ವಿಯಾದರು. ಈ ವೇಳೆ ಕೈದಿಗಳು ಪರಾರಿಯಾಗುವುದನ್ನು ತಡೆಯಲು ಯತ್ನಿಸಿದ ಪೊಲೀಸರು ಅವರನ್ನು ಗುರಿಯನ್ನಾಗಿಸಿ ಗುಂಡುಹಾರಿಸಿದ್ದಾರೆ. ಈ ವೇಳೆ ಇಬ್ಬರು ಕೈದಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ತಪ್ಪಿಸಿಕೊಂಡವರ ಬಂಧನಕ್ಕಾಗಿ ಜಿಲ್ಲಾದ್ಯಂತ ಕಟ್ಟೆಚ್ಚರ ಘೋಷಿಸಲಾಗಿದೆ. ಮೃತ ನಕ್ಸಲರನ್ನು ತಿಪಾದಾಸ್ ಹಾಗೂ ರಾಮ್‌ವಿಲಾಸ್ ತಾತಿ ಎಂದು ಗುರುತಿಸಲಾಗಿದೆ.

ನಿನ್ನೆ 40ಕ್ಕೂ ಹೆಚ್ಚು ಮಂದಿ ಕೈದಿಗಳನ್ನು ವಿಚಾರಣೆಗಾಗಿ ಪೊಲೀಸ್ ವ್ಯಾನ್‌ವೊಂದರಲ್ಲಿ ಸ್ಥಳೀಯ ನ್ಯಾಯಾಲಯಕ್ಕೆ ಕರೆದೊಯ್ಯಲಾಗಿತ್ತು. ವಿಚಾರಣೆ ಬಳಿಕ ಮರಳಿ ಈ ಕೈದಿಗಳನ್ನು ಜೈಲಿನ ಆವರಣದಲ್ಲಿ ಇಳಿಸುತ್ತಿದ್ದಾಗ, ಇವರುಗಳು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಈ ವೇಳೆ ಐವರು ಕೈದಿಗಳಿಗೆ ಪೊಲೀಸರು ಗುಂಡಿಟ್ಟಿದ್ದಾರೆ. ಈ ವೇಳೆ ಇಬ್ಬರು ನಕ್ಸಲರು ಸ್ಥಳದಲ್ಲೇ ಸಾವನ್ನಪ್ಪಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT