ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ದೇಶ

ತುರ್ತು ಪರಿಸ್ಥಿತಿ ಘೋಷಣೆ ಬಗ್ಗೆ ಇಂದಿರಾಗೆ ಅರಿವಿರಲಿಲ್ಲ: ಪ್ರಣಬ್

1975ರಲ್ಲಿ ಘೋಷಿಸಲಾಗಿದ್ದ ತುರ್ತು ಪರಿಸ್ಥಿತಿ ಬಗ್ಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಯಾವುದೇ ಅರಿವಿರಲಿಲ್ಲ...

ನವದೆಹಲಿ: 1975ರಲ್ಲಿ ಘೋಷಿಸಲಾಗಿದ್ದ ತುರ್ತು ಪರಿಸ್ಥಿತಿ ಬಗ್ಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಯಾವುದೇ ಅರಿವಿರಲಿಲ್ಲ, ಆ ಸಮಯದಲ್ಲಿ ಸಿದ್ಧಾರ್ಥ ಶಂಕರ್ ರೇ ಅವರು ಈ ತುರ್ತು ಪರಿಸ್ಥಿತಿ ಘೋಷಿಸಲು ಸೂಚಿಸಿದ್ದು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಬರೆದಿರುವ 'ದಿ ಡ್ರಮಾಟಿಕ್ ಡಿಕೇಡ್: ದಿ ಇಂದಿರಾ ಗಾಂಧಿ ಯಿಯರ್ಸ್‌' ಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಲಾಗಿದ್ದು, ತುರ್ತು ಪರಿಸ್ಥಿತಿ ಘೋಷಣೆ ಇಂದಿರಾ ಅವರ ನಿರ್ಧಾರವಾಗಿರಲಿಲ್ಲ, ಅದನ್ನು ಘೋಷಣೆ ಮಾಡುವಂತೆ ಒತ್ತಡ ಹೇರಿದ್ದವರು ಸಿದ್ಥಾರ್ಥ್ ಶಂಕರ್ ರೇ ಎಂದು ಪ್ರಸ್ತಾಪವಾಗಿದೆ.

ತುರ್ತು ಪರಿಸ್ಥಿತಿ ಘೋಷಿಸುವಲ್ಲಿ ಪ್ರಧಾನ ಪಾತ್ರ ಪಶ್ಚಿಮಬಂಗಾಳದ ಮುಖ್ಯಮಂತ್ರಿಯಾದ ಸಿದ್ದಾರ್ಥ ಶಂಕರ್ ರೇ ಅವರದು. ತುರ್ತು ಪರಿಸ್ಥಿತಿ ಘೋಷಿಸಲು ಸಲಹೆ ನೀಡಿದ ಹಿನ್ನಲೆಯಲ್ಲಿ ಇಂದಿರಾ ಗಾಂಧಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಪಶ್ಚಿಮಬಂಗಾಳದ ಮುಖ್ಯಮಂತ್ರಿಯಾದ ಸಿದ್ದಾರ್ಥ ಶಂಕರ್ ರೇ ಅವರು ತುರ್ತು ಪರಿಸ್ಥಿತಿಯನ್ನು ಜಾರಿಗೆ ತರುವಂತೆ ಪ್ರಧಾನಿಯ ಬಳಿ ಬೇಡಿಕೆ ಇಟ್ಟಿದ್ದರು. ಆಂತರಿಕ ತೊಂದರೆಗಳಿಂದ ದೇಶದ ಭದ್ರತಾ ವ್ಯವಸ್ಥೆಯ ಮೇಲೆ ಪರಿಣಾವಾಗುತ್ತಿದೆ ಆದ್ದರಿಂದ ಆಂತರಿಕ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡುವಂತೆ ಅಂದಿನ ರಾಷ್ಟ್ರಪತಿ ಫಕ್ರುದ್ದಿನ್ ಅಲಿ ಅಹಮ್ಮದ್ ಕರಡು ಪ್ರತಿಯನ್ನು ಕಳುಹಿಸಿದ್ದರು. ಈ ಹಿನ್ನಲೆಯಲ್ಲಿ ಜೂನ್ 25, 1975ರ ಮಧ್ಯರಾತ್ರಿ ಆಂತರಿಕ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿದರು.

ಸಂವಿಧಾನಾತ್ಮಕ ಉಪಬಂಧದ ಬಗ್ಗೆ ನನಗೆ ಅರಿವಿರಲಿಲ್ಲ. ತುರ್ತು ಪರಿಸ್ಥಿತಿ ಘೋಷಣೆ ನಿಯಮಗಳ ಬಗ್ಗೆ ಅರಿವಿಲ್ಲದೆಯೇ ಸಿದ್ಧಾರ್ಥ ಶಂಕರ್ ರೇ ಅವರ ಸಲಹೆ ಮೇರೆಗೆ ನಿರ್ಧಾರ ತೆಗೆದುಕೊಂಡೇ ಎಂದು ಸ್ವತಃ ಇಂದಿರಾಗಾಂಧಿ ಅವರೇ ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ಪುಸ್ತಕದಲ್ಲಿ ಪ್ರಣಬ್ ಬರೆದಿದ್ದಾರೆ.

ತುರ್ತು ಪರಿಸ್ಥಿತಿ ವಿವಾದದಲ್ಲಿ ಕೇವಲ ಇಂದಿರಾಗಾಂಧಿ ಅವರನ್ನಾ ದೂಷಿಸಲಾಗುತ್ತಿದೆ. ಇದರ ಬೆನ್ನ ಹಿಂದೆ ಬೇರೆಯವರ ಕೆಲಸವಿದ್ದರೂ ಇಂದಿರಾ ಅವರ ಮೇಲೆ ಆರೋಪ ಮಾಡಲಾಗುತ್ತಿದೆ ಎಂದು ಪ್ರಣಬ್ ವಿಷಾಧ ವ್ಯಕ್ತಪಡಿಸಿದ್ದಾರೆ.

ಪ್ರಣಬ್ ಮುಖರ್ಜಿ ಬರೆದಿರುವ ಪುಸ್ತಕ 321 ಪುಟಗಳನ್ನೊಳಗೊಂಡಿದ್ದು, ವಿವಿಧ ವಿಷಯಗಳ ಬಗ್ಗೆ ಬರೆದಿದ್ದಾರೆ. ಜೆಪಿ ಚಳುವಳಿ, ಬಾಂಗ್ಲಾದೇಶ ಸ್ವಾತಂತ್ರ್ಯ, ಕಾಂಗ್ರೆಸ್ ವಿಭಜನೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಪ್ರಣಬ್ ಪ್ರಸ್ತಾಪಿಸಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT