ಯು ಬಿ ಬಣಕಾರ, ಪ್ರಭು ಚೌವಾಣ್ 
ದೇಶ

ಶಾಸಕ ಪ್ರಭು ಚೌಹಾಣ್, ಯು.ಬಿ ಬಣಕಾರ್‌ಗೆ ಬಿಜೆಪಿ ಶೋಕಾಸ್ ನೋಟಿಸ್

ಬೆಂಗಳೂರು: ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಮೊಬೈಲ್‌ನಲ್ಲಿ ಫೋಟೋ ನೋಡಿ, ಆಟವಾಡಿ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದ ಶಾಸಕರಿಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದು, ಮೂರು ದಿನಗಳೊಳಗೆ ನೋಟಿಸ್‌ಗೆ ಉತ್ತರಿಸುವಂತೆ ಸೂಚಿಸಿದೆ.

ರಾಜ್ಚ ಬಿಜೆಪಿ ಶಿಸ್ತು ಸಮಿತಿ ಸಂಚಾಲಕರಾದ ರಘುನಾಥರಾಮ್ ಮಲ್ಕಾಪುರೆ ಅವರು ಮೊಬೈಲ್‌ನಲ್ಲಿ ಫೋಟೋ ನೋಡಿದ್ದ ಔರಾದ್ ಶಾಸಕ ಪ್ರಭು ಚೌವಾಣ್ ಮತ್ತು ಹಿರೇಕೆರೂರು ಶಾಸಕ ಯು.ಬಿ ಬಣಕಾರ ಅವರಿಗೆ ಇಂದು ನೋಟಿಸ್ ಜಾರಿಗೊಳಿಸಿದೆ.

ಡಿ.10ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದ ವೇಳೆ ಶಾಸಕರು ಮೊಬೈಲ್‌ನಲ್ಲಿ ಚಿತ್ರಗಳನ್ನು ವೀಕ್ಷಿಸಿದ್ದು, ಇದು ಖಾಸಗಿ ಸುದ್ದಿವಾಹಿನಿ ಹಾಗೂ ದಿನಪತ್ರಿಕೆಗಳಲ್ಲಿ ಪ್ರಸಾರಗೊಂಡಿತ್ತು. ಇದು ಗಂಭೀರ ವರ್ತನೆಯಾಗಿದ್ದು, ಇದರಿಂದ ಪಕ್ಷಕ್ಕೆ ಮುಜುಗರ ಉಂಟಾಗಿದೆ. ಪಕ್ಷ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ನೋಟಿಸ್ ತಲುಪಿದ ಮೂರು ದಿನಗಳಲ್ಲಿ ವಿವರಣೆ ನೀಡಬೇಕೇಂದು ಸೂಚನೆ ನೀಡಲಾಗಿದೆ.

ಘಟನೆ ಹಿನ್ನೆಲೆ
ಸದನದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚೆ ನಡೆಯುತ್ತಿದ್ದಾಗ ಪ್ರಭು ಚೌವಾಣ್ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರ ಚಿತ್ರವನ್ನು ನೋಡುತ್ತಿದ್ದರು. ಯು.ಬಿ ಬಣಕಾರ ಅವರು ಕ್ಯಾಂಡಿಕ್ರಶ್ ಆಟವಾಡುತ್ತಿದ್ದರು. ಈ ಬಗ್ಗೆ ಸದನದಲ್ಲಿ ಗುರುವಾರ ಕೋಲಾಹಲಕ್ಕೆ ಕಾರಣವಾಗಿದ್ದು ಕಲಾಪ ಸಂಪೂರ್ಣವಾಗಿ ವ್ಯರ್ಥವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!