ಮದು ಕೊಡಾ 
ದೇಶ

ಕಲ್ಲಿದ್ದಲು ಹಗರಣ: ಮಧು ಕೋಡಾ ಸೇರಿ ಏಳು ಮಂದಿ ವಿರುದ್ಧ ಚಾರ್ಜ್‌ಶೀಟ್

ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮಧು ಕೋಡಾ, ಜಾರ್ಖಂಡ್‌ನ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್ ಬಸು ಸೇರಿದಂತೆ ಏಳು ಮಂದಿ ವಿರುದ್ಧ ಸಿಬಿಐ ಚಾರ್ಜ್‌ಶೀಟ್ ದಾಖಲಿಸಿದೆ.

ಸಿಬಿಐ ಆರೋಪಿಗಳ ವಿರುದ್ಧದ ಆರೋಪ ಪಟ್ಟಿಯನ್ನು ವಿಶೇಷ ಸಿಬಿಐ ಕೋರ್ಟ್‌ನ ನ್ಯಾಯಾದೀಶ ಭರತ್ ಭೂಷಣ್ ಅವರಿಗೆ ಸಲ್ಲಿಸಲಾಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಇನ್ನು ಒಂದೆರಡು ದಿನಗಳಲ್ಲಿ ಸಲ್ಲಿಸುವುದಾಗಿ ತನಿಖಾಧಿಕಾರಿಗಳು ನ್ಯಾಯಾಧೀಶರಿಗೆ ತಿಳಿಸಿದ್ದು, ಡಿಸೆಂಬರ್ 22ಕ್ಕೆ ಪರಿಗಣಿಸಲಾಗುವುದು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಮಧು ಕೋಡಾ ಮತ್ತು ಬಸು ಸೇರಿದಂತೆ ಕಲ್ಲಿದ್ದಲು ಮಾಜಿ ಕಾರ್ಯದರ್ಶಿ ಹೆಚ್.ಸಿ ಗುಪ್ತಾ ಮತ್ತು ಇಬ್ಬರು ಸಾರ್ವಜನಿಕ ಅಧಿಕಾರಿಗಳಾದ ಬಸಂತ್ ಕುಮಾರ್ ಭಟ್ಟಾಚಾರ್ಯ ಮತ್ತು ಬಿಪಿನ್ ಬಿಹಾರಿ ಸಿಂಗ್ ವಿರುದ್ಧ ಸಹ ಆರೋಪಪಟ್ಟಿ ಸಲ್ಲಿಸಲಾಗಿದೆ.

ವಿನಿ ಕಬ್ಬಿಣ ಮತ್ತು ಉಕ್ಕು ಉದ್ಯೋಗ್ ಲಿಮಿಟೆಟ್‌ನ ನಿರ್ದೇಶಕ ವೈಭವ್ ತುಲ್ಸ್ಯಾನ್ ಮತ್ತು ಖಾಸಗಿ ವ್ಯಕ್ತಿ ವಿಜಯ್ ಜೋಷಿ ಅವರನ್ನು ಹೆರಸನ್ನು ಸಿಬಿಐ ಅಧಿಕಾರಿಗಳು ಅಂತಿಮ ವರದಿಯಲ್ಲಿ ಸೇರಿಸಿದ್ದು, ಅವರ ವಿರುದ್ಧ ಐಪಿಸಿ ಸೆಕ್ಷನ್ 120ಬಿ(ಕ್ರಿಮಿನಲ್ ಸಂಚು), 420(ವಂಚನೆ) ಆರೋಪದಡಿ ಆರೋಪಪಟ್ಟಿಯನ್ನು ಸಿಬಿಐ ಸಲ್ಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT