ಮದನ್ ಮಿತ್ರ 
ದೇಶ

ಶಾರದಾ ಚಿಟ್‌ಫಂಡ್ ಹಗರಣ: ಸಚಿವ ಮದನ್ ಮಿತ್ರ ಬಂಧನ

ಬಹುಕೋಟಿ ಶಾರದಾ ಚಿಟ್‌ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಾರಿಗೆ ಸಚಿವ ಮತ್ತು ತೃಣಮೂಲ ಕಾಂಗ್ರೆಸ್...

ಕೊಲ್ಕತಾ: ಬಹುಕೋಟಿ ಶಾರದಾ ಚಿಟ್‌ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಾರಿಗೆ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ ಮುಖಂಡ ಮದನ್ ಮಿತ್ರರನ್ನು ಸಿಬಿಐ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಇಂದು ಬೆಳಗ್ಗೆ ಸಿಬಿಐ ವಿಚಾರಣೆಗೆ ಮದನ್ ಮಿತ್ರ ಆಗಮಿಸಿದ್ದರು. ಸರಿ ಸುಮಾರು 5 ಗಂಟೆಗಳ ಕಾಲ ಸುದೀರ್ಘ ವಿಚಾರಣೆ ಬಳಿಕ ಸಿಬಿಐ ಅಧಿಕಾರಿಗಳು ಮಿತ್ರರನ್ನು ಬಂಧಿಸಿದ್ದಾರೆ.

ಮದನ್ ಮಿತ್ರ ಶಾರದಾ ಗ್ರೂಪ್ ಆಫ್ ಕಂಪನಿ ಮೇಲೆ ತಮ್ಮ ಹಿಡಿತವನ್ನು ಹೊಂದಿದ್ದರು. ಈ ಹಿನ್ನೆಲೆಯಲ್ಲಿ ಸಿಬಿಐ ವಿಚಾರಣೆಗೆ ಹಾಜರಾಗುವಂತೆ ನವೆಂಬರ್‌ನಲ್ಲಿ ಸಮನ್ಸ್ ಜಾರಿ ಮಾಡಿತ್ತು. ಆದರೆ ಅನಾರೋಗ್ಯದ ನೆಪ ಹೇಳಿಕೊಂಡು ವಿಚಾರಣೆಗೆ ಗೈರಾಗುತ್ತಿದ್ದರು. ಹೀಗಾಗಿ ಮದನ್ ಮಿತ್ರರನ್ನು ಇಂದು ಸಂಜೆ ಬಂಧಿಸಿದ್ದಾರೆ. ಕ್ರಿಮಿನಲ್ ಸಂಚು ವಂಚನೆ ಆರೋಪದಡಿ ಮಿತ್ರರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮದನ್ ಮಿತ್ರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಪ್ತರಾಗಿದ್ದಾರೆ. ಶಾರದಾ ಚಿಟ್‌ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ತೃಣಮೂಲ ಕಾಂಗ್ರೆಸ್‌ನ ಮೂರನೇ ನಾಯಕನನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಇದಕ್ಕೂ ಮುನ್ನ ಮಾಜಿ ಸಂಸದರಾದ ಕುನಾಲ್ ಘೋಷ್ ಮತ್ತು ಶ್ರೀನ್‌ಜೋಯ್ ಬೋಸ್‌ರನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ