ದೇಶ

ಗಾಯಗೊಂಡಿದ್ದ ಬಾಲಕನ ಸಾವು

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಗಾಯಗೊಂಡಿದ್ದ 2 ವರ್ಷದ ಬಾಲಕ ಆಕಾಶ್, ವಾಣಿ ವಿಲಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಶುಕ್ರವಾರ ಮೃತಪಟ್ಟಿದ್ದಾನೆ.

ಕಟ್ಟಡದಿಂದ ಬಿದ್ದ ಪರಿಣಾಣ ತಲೆಗೆ ತೀವ್ರ ಪೆಟ್ಟಾಗಿ, ಮೆದುಳಿಗೆ ಹಾನಿ ಉಂಟಾಗಿ ಬಾಲಕನ ಪರಿಸ್ಥಿತಿ ಗಂಭೀರವಾಗಿತ್ತು. ಹಾಗಾಗಿ ಎಲ್ಲ ರೀತಿಯ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಕಾರಣ ಬಾಲಕನ ಜೀವ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. ಇದರಲ್ಲಿ ವೈದ್ಯರ ನಿರ್ಲಕ್ಷ್ಯ ಇಲ್ಲವೆಂದು ವಾಣಿವಿಲಾಸ ಆಸ್ಪತ್ರೆ ಅಧೀಕ್ಷಕ ಡಾ.ಗಂಗಾಧರ ಬೆಳಗಾಡಿ ತಿಳಿಸಿದ್ದಾರೆ.

ಕೋರಮಂಗಲ ಸಮಾಪದ ಜಕ್ಕಸಂದ್ರದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಪಳನಿ ಮತ್ತು ಗೋವಿಂದಮ್ಮ ದಂಪತಿಯ ಪುತ್ರ ಆಕಾಶ್, ಮಂಗಳವಾರ ಆಟವಾಡುತ್ತಿದ್ದಾಗ 2ನೇ ಮಹಡಿಯಿಂದ ಆಯತಪ್ಪಿ ಬಿದ್ದು ಗಾಯಗೊಂಡಿದ್ದ.

ಪಾಲಕರು ಬಾಲಕನನ್ನು ಇಂದಿರಾ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರೂ. ಆದರೆ, ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಬಾಲಕನ ಸ್ಥಿತಿ ಗಂಭೀರವಾಗಿದ್ದು, ನಿಮ್ಹಾನ್ಸ್‌ಗೆ ಕರೆದೊಯ್ಯುವಂತೆ ಹೇಳಿದ್ದರು. ನಿಮ್ಹಾನ್ಸ್‌ನಲ್ಲಿ ವೆಂಟಿಲೇಟರ್ ಇಲ್ಲವೆಂದು ನಿರ್ಲಕ್ಷ್ಯ ತೋರಿದ್ದರು. ಹೀಗಾಗಿ ಬಾಲಕನನ್ನು ವಾಣಿವಿಲಾಸ ಆಸ್ಪತ್ರೆಗೆ ದಾಖಲಿಸಲಾಗಿತ್ತು.

SCROLL FOR NEXT