ದೇಶ

ರೆಡ್ಡಿ ಬಿಡುಗಡೆಗೆ ಸಿಬಿಐನಿಂದ 7 ಷರತ್ತುಗಳು

ರೆಡ್ಡಿ ಬಳ್ಳಾರಿಗೆ ಭೇಟಿ ನೀಡಬಾರದು, ಇಬ್ಬರ ಶ್ಯೂರಿಟಿಯ ಮೇರೆಗೆ ಭಾರಿ ಮೊತ್ತದ ಹಣ ಠೇವಣಿ...

ನವದೆಹಲಿ: ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲು ಪಾಲಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಸಿಬಿಐ 7 ಷರತ್ತುಗಳ ಪಟ್ಟಿಯನ್ನು ಸೋಮವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ.

ರೆಡ್ಡಿ ವಿರುದ್ಧದ ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದ ಜಾಮೀನು ಅರ್ಜಿ ವಿಚಾರಣೆ ವೇಳೆ, ರೆಡ್ಡಿಗೆ ಜಾಮೀನು ನೀಡಲು ವಿರೋಧ ವ್ಯಕ್ತಪಡಿಸಿದ ಸಿಬಿಐ, ಜಾಮೀನು ನೀಡುವುದಾದರೆ ಈ 7 ಷರತ್ತುಗಳನ್ನು ವಿಧಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ರೆಡ್ಡಿ ಜಾಮೀನು ಪಡೆದ ನಂತರ ಬಳ್ಳಾರಿಗೆ ಭೇಟಿ ನೀಡಬಾರದು, ಇಬ್ಬರ ಶ್ಯೂರಿಟಿಯ ಮೇರೆಗೆ ಭಾರಿ ಮೊತ್ತದ ಹಣ ಠೇವಣಿ ಇಡಬೇಕು. ಕೋರ್ಟ್‌ಗೆ ಜನಾರ್ದನ ರೆಡ್ಡಿ ತನ್ನ ಪಾಸ್‌ಪೋರ್ಟ್‌ನ್ನು ಸಲ್ಲಿಸಬೇಕು, ವಿಚಾರಣೆಯ ವೇಳೆ ಕೋರ್ಟ್‌ಗೆ ಜನಾರ್ದನ ರೆಡ್ಡಿ ತಪ್ಪದೇ ಹಾಜರಾಗಬೇಕು, ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡಬಾರದು ಎಂಬ ಷರತ್ತುಗಳು ಸೇರಿದಂತೆ ಕೋರ್ಟ್ ಕೆಲವು ಕಠಿಣ ಷರತ್ತುಗಳನ್ನು ವಿಧಸಬೇಕು ಎಂದು ಸಿಬಿಐ ಮನವಿ ಮಾಡಿದೆ.

ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದ ಜಾಮೀನಿಗೆ ಸಂಬಂಧಿಸಿದ ಷರತ್ತುಗಳನ್ನು ಅಫಿಡವಿಟ್ ಮೂಲಕ ಸಲ್ಲಿಸುವಂತೆ ಅರ್ಜಿ ವಿಚಾರಣೆ ಸಲ್ಲಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಹೆಚ್.ಎಲ್.ದತ್ತು ಸಿಬಿಐಗೆ ಸೂಚಿಸಿ, ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!