ವಿಶ್ವವಿಖ್ಯಾತ ಮಧುರೈ ಮೀನಾಕ್ಷಿ ದೇವಸ್ಥಾನ (ಸಂಗ್ರಹ ಚಿತ್ರ) 
ದೇಶ

ಮಧುರೈ ಮೀನಾಕ್ಷಿ ದೇವಸ್ಥಾನದ ವೆಬ್‌ಸೈಟ್ ಹ್ಯಾಕ್

ದಕ್ಷಿಣ ಭಾರತದ ಖ್ಯಾತ ದೇವಾಲಯಗಳಲ್ಲಿ ಒಂದಾಗಿರುವ ಮಧುರೈ ಮೀನಾಕ್ಷಿ ದೇವಾಲಯದ ಅಧಿಕೃತ ವೆಬ್‌ಸೈಟ್ ಅನ್ನು ಹ್ಯಾಕರ್ಸ್‌ಗಳು ಹ್ಯಾಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮಧುರೈ: ದಕ್ಷಿಣ ಭಾರತದ ಖ್ಯಾತ ದೇವಾಲಯಗಳಲ್ಲಿ ಒಂದಾಗಿರುವ ಮಧುರೈ ಮೀನಾಕ್ಷಿ ದೇವಾಲಯದ ಅಧಿಕೃತ ವೆಬ್‌ಸೈಟ್ ಅನ್ನು ಹ್ಯಾಕರ್ಸ್‌ಗಳು ಹ್ಯಾಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸ್ ಮೂಲಗಳು ತಿಳಿಸಿರುವಂತೆ ಭಾನುವಾರ ರಾತ್ರಿ ಹ್ಯಾಕರ್ಸ್‌ಗಳು ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಿದ್ದು, ದೇವಸ್ಥಾನಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿಗಳನ್ನು ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ವೆಬ್‌ಸೈಟ್ ಹ್ಯಾಕ್‌ಗೆ ಸಂಬಂಧಿಸಿದಂತೆ ದೇವಾಲಯದ ಆಡಳಿತ ಮಂಡಳಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ದೂರು ಸಲ್ಲಿಸಿದೆ.

ಆದರೆ ಪ್ರಕರಣ ಸಂಬಂಧ ಮಾಧ್ಯಮಗಳಿಗೆ ಹೆಚ್ಚಿನ ಮಾಹಿತಿ ನಿರಾಕರಿಸಲಾಗಿದ್ದು, ಪೊಲೀಸ್ ಆಯುಕ್ತರಲ್ಲಿಯೂ ಮಾಧ್ಯಮಗಳಿಗೆ ಹೆಚ್ಚಿನ ಮಾಹಿತಿ ನೀಡದಂತೆ ದೇವಾಲಯ ಅಡಳಿತ ಮಂಡಳಿಯ ಸಿಬ್ಬಂದಿಗಳು ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಧುರೈ ಪೊಲೀಸ್ ಆಯುಕ್ತ ಸಂಜಯ್ ಮಥುರ್ ಅವರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದ್ದು, ಈಗಾಗಲೇ ತನಿಖೆ ಆರಂಭವಾಗಿದೆ ಎಂದು ತಿಳಿದುಬಂದಿದೆ.

ದಕ್ಷಿಣ ಭಾರತದ ಖ್ಯಾತ ಮತ್ತು ಪುರಾತನ ದೇವಾಲಯಗಳಲ್ಲಿ ಒಂದಾಗಿರುವ ಮಧುರೈ ಮೀನಾಕ್ಷಿ ದೇವಾಲಯದಲ್ಲಿ ಸುಮಾರು 33 ಸಾವಿರಕ್ಕೂ ಅಧಿಕ ಶಿಲ್ಪಕಲಾಕೃತಿಗಳಿದ್ದು, ತನ್ನ ವಿಶಿಷ್ಟ ವಾಸ್ತುಶಿಲ್ಪದಿಂದಲೇ ದೇವಾಲಯ ವಿಶ್ವವ್ಯಾಪಿ ಪ್ರಸಿದ್ಧಿಗಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

ಬೆಂಗಳೂರಿನಲ್ಲಿ ಮನೆ ಖರೀದಿದಾರರಿಗೆ 927 ಕೋಟಿ ವಂಚನೆ ಆರೋಪ: ಓಜೋನ್ ಅರ್ಬಾನಾ CMD ವಾಸುದೇವನ್ ಬಂಧನ!

Asian Games 2026: 1 ನಿಮಿಷದಲ್ಲಿ 2 ಚಿನ್ನದ ಪದಕ ಗೆದ್ದ ಭಾರತ, 75 ಪದಕಗಳೊಂದಿಗೆ 5ನೇ ಸ್ಥಾನಕ್ಕೆ ಲಗ್ಗೆ!

‘CEC ಜ್ಞಾನೇಶ್ ಕುಮಾರ್ ದೇಶದ್ರೋಹಿ’: ಮುಂಬೈನಲ್ಲಿ ಭುಗಿಲೆದ್ದ Cockroach Janata Party ಪ್ರತಿಭಟನೆ, ರಾಜೀನಾಮೆಗೆ ಬಿಗಿಪಟ್ಟು..!

ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ Biggboss ಮಾಜಿ ಸ್ಪರ್ಧಿ ಜಾಹ್ನವಿ ನೇಮಕ!