ಸಾಂದರ್ಭಿಕ ಚಿತ್ರ 
ದೇಶ

ಕಾರು ಅಡ್ಡಗಟ್ಟಿ ಸುಲಿಗೆ: ಇಬ್ಬರ ಸೆರೆ

ಹಲಸೂರು ಕೆರೆ ಸಮೀಪ ಕಾರು ಅಡ್ಡಗಟ್ಟಿ ಸುಲಿಗೆ ಮಾಡಿ...

ಬೆಂಗಳೂರು: ಹಲಸೂರು ಕೆರೆ ಸಮೀಪ ಕಾರು ಅಡ್ಡಗಟ್ಟಿ ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ಇಬ್ಬರು ಸುಲಿಗೆಕೋರರನ್ನು ಗಸ್ತಿನಲ್ಲಿದ್ದ ಭಾರತಿನಗರ ಪೊಲೀಸರು ಬಂಧಿಸಿದ್ದಾರೆ.

ಆರ್.ಟಿ. ನಗರ ಸುಲ್ತಾನ್‌ಪಾಳ್ಯ ನಿವಾಸಿ ಅನಿಲ್‌ಕುಮಾರ್ (38) ಹಾಗೂ ಕೋಲಾರ ಜಿಲ್ಲೆ ಮಾಲೂರು ಮೂಲದ ಫೈಜುಲ್ (45) ಬಂಧಿತರು.

ಶನಿವಾರ ರಾತ್ರಿ 8.30ರ ಸುಮಾರಿಗೆ ಸಿದ್ಧಾರ್ಥ ಎಂಬುವರು ತಮ್ಮ ಗೆಳತಿಯೊಂದಿಗೆ ಕಾರಿನಲ್ಲಿ ಹಲಸೂರು ಕೆರೆ ಬಳಿ ಹೋಗುತ್ತಿದ್ದಾಗ ಪಲ್ಸರ್ ಬೈಕ್‌ನಲ್ಲಿ ವೇಗವಾಗಿ ಬಂದು ಕಾರು ಅಡ್ಡಗಟ್ಟಿದ್ದಾರೆ.

ಏರುಧ್ವನಿಯಲ್ಲಿ ತಾವು ಕ್ರೈ ಬ್ರ್ಯಾಂಚ್ ಪೊಲೀಸರು, ಕೆಳಗಿಳಿಯಿರಿ ಎಂದು ಜೋರು ಮಾಡಿದ್ದಾರೆ. ಅಲ್ಲದೇ ಜೇಬಿಗೆ ಕೈ ಹಾಕಿ ಪರ್ಸ್‌ನಲ್ಲಿದ್ದ 1700 ನಗದು ಕಿತ್ತುಕೊಂಡು ಪರಾರಿಯಾಗುವ ಯತ್ನದಲ್ಲಿದ್ದರು. ಅದೇ ವೇಳೆ ಗಸ್ತಿನಲ್ಲಿದ್ದ ಪೊಲೀಸರು ಆರೋಪಿಗಳನ್ನು ಹಿಡಿದುಕೊಂಡಿದ್ದಾರೆ.

ಆರೋಪಿಗಳು ಸುಲಿಗೆ ಮಾಡಿದ 1700 ನಗದು, ಕೃತ್ಯಕ್ಕೆ ಬಳಸಿದ್ದ ಬೈಕ್ ಹಾಗೂ 2 ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!

IIT Bombay ವಿದ್ಯಾರ್ಥಿ ನಕಲು ಮಾಡಿದ್ದನ್ನು ತಡೆದಿದ್ದೇ ತಪ್ಪಾ? ಪ್ರೊಫೆಸರ್ ವಿರುದ್ಧ ಪ್ರತಿಭಟನೆ; ಯಾರು ಈ ಪ್ರೊ. Suryanarayana Doolla?

TMC ಹೆಸರು-ಚಿಹ್ನೆ ಫ್ರೀಜ್; ಚುನಾವಣಾ ಆಯೋಗದ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಆಕ್ಷೇಪ, ತುರ್ತು ವಿಚಾರಣೆಗೆ ಸುಪ್ರೀಂ ಒಪ್ಪಿಗೆ..!

ಭೂಮಿಯನ್ನು ಸುತ್ತುತ್ತಿರುವ ಆಯುಧಗಳು: ಭಾರತದ ಮುಂದಿರುವ ಸವಾಲುಗಳೇನು? (ಜಾಗತಿಕ ಜಗಲಿ)

ರಾಯಲಸೀಮೆ ವಿಸ್ಮಯ; ನೀರಿಲ್ಲದೇ ಗಣಪನ ವಿಸರ್ಜನೆ, ನದಿ ತಟದಲ್ಲಿ ಮೂರ್ತಿಗಳು ಅನಾಥ; ಕೊನೆಗೂ ಸುರಿದ ಮಳೆರಾಯ, Video