ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ 
ದೇಶ

ಯಾವುದೇ ಕ್ಲಿಷ್ಟಕರ ಪರಿಸ್ಥಿತಿ ಎದುರಿಸಲು ಭಾರತ ಸಿದ್ಧ: ಪರಿಕ್ಕರ್

ಯಾವುದೇ ರೀತಿಯ ಕ್ಲಿಷ್ಟಕರ ಪರಿಸ್ಥಿತಿ ಎದುರಿಸಲು ಭಾರತ...

ನವದೆಹಲಿ: ಯಾವುದೇ ರೀತಿಯ ಕ್ಲಿಷ್ಟಕರ ಪರಿಸ್ಥಿತಿ ಎದುರಿಸಲು ಭಾರತ ಸಿದ್ಧವಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಹೇಳಿದ್ದಾರೆ.

ಸಿಡ್ನಿ ಒತ್ತೆಯಾಳು ಪ್ರಕರಣದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಮಾತನಾಡಿದ ರಕ್ಷಣಾ ಸಚಿವ ಪರಿಕ್ಕರ್ ಅವರು, ಭಾರತದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ಹಿಂದಿನಿಂದಲೇ ಮುನ್ನೆಚ್ಚರಿಕೆ ವಹಿಸಲಾಗಿದೆ. ಸಿಡ್ನಿ ಪ್ರಕರಣದ ನಂತರ ದೇಶದಾದ್ಯಂತ ಈಗಾಗಲೇ ಹೈ ಅಲರ್ಟ್ ಘೋಷಿಸಲಾಗಿದೆ. ಭಾರತದಲ್ಲಿ ಯಾವುದೇ ಸಮಯದಲ್ಲಿ ಇಂತಹ ಸನ್ನಿವೇಶಗಳು ಎದುರಾದರೆ ಅದನ್ನು ಎದುರಿಸಲು ಭಾರತ ಸಿದ್ಧವಿದೆ ಎಂದು ಹೇಳಿದ್ದಾರೆ.

ಅಲ್ಲದೆ, ಘಟನೆ ಸಂಭವಿಸುವುದರ ಕುರಿತು ಚರ್ಚೆ ನಡೆಸಿ ಪ್ರಕರಣಗಳಿಗೆ ಪ್ರಚೋದನೆ ನೀಡುವುದಕ್ಕಿಂತ ಈ ಬಗ್ಗೆ ಮಾತನಾಡದೆ ಸುಮ್ಮನಿರುವುದು ಒಳ್ಳೆಯದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿನ್ನೆ ಸಿಡ್ನಿಯ ಒಪೆರಾ ಹೌಸ್ ಕಟ್ಟಡದಲ್ಲಿರುವ ಕೆಫೆಯ ಮೇಲೆ ದಾಳಿ ನಡೆಸಿ ಸುಮಾರು 17ಕ್ಕೂ ಹೆಚ್ಚು ಮಂದಿಯನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದರು. ದಾಳಿ ಕುರಿತುಂತೆ ಆಸ್ಟ್ರೇಲಿಯಾ ಉಗ್ರ ನಿಗ್ರಹ ಸಿಬ್ಬಂದಿಗಳು ಸೋಮವಾರ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಉಗ್ರನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದರು. ಘಟನೆಯಲ್ಲಿ ಒತ್ತೆಯಾಳುಗಳಾಗಿದ್ದ ಲಿಂಟ್ ಕಾಫಿ ಕೆಫೆಯ ಮ್ಯಾನೇಜರ್ ಹಾಗೂ ಓರ್ವ ಸಾರ್ವಜನಿಕ ಸಾವನ್ನಪ್ಪಿದ್ದ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ