ಮಧ್ಯಪ್ರದೇಶ ಜೈಲಿನಿಂದ ಪರಾರಿಯಾದ ಐದು ಮಂದಿ ಶಂಕಿತ ಉಗ್ರರು (ಸಂಗ್ರಹ ಚಿತ್ರ) 
ದೇಶ

ಒಬಾಮ ಭಾರತ ಭೇಟಿ ವೇಳೆ ಲಷ್ಕರ್ ಉಗ್ರರ ದಾಳಿ ಸಂಚು

ಒಬಾಮ ಅವರ ಭಾರತ ಪ್ರವಾಸದ ವೇಳೆ ಲಷ್ಕರ್ ಇ ತಾಲಿಬಾನಿ ಉಗ್ರರು ವಿಧ್ವಂಸಕ ಕೃತ್ಯ ನಡೆಸಲು ಹೊಂಚು ಹಾಕಿದ್ದಾರೆ..

ನವದೆಹಲಿ: ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರ ಭಾರತ ಪ್ರವಾಸದ ವೇಳೆ ಲಷ್ಕರ್ ಇ ತಾಲಿಬಾನಿ ಉಗ್ರರು ವಿಧ್ವಂಸಕ ಕೃತ್ಯ ನಡೆಸಲು ಹೊಂಚು ಹಾಕಿದ್ದಾರೆ ಎಂದು ವಿದೇಶಿ ಗುಪ್ತಚರ ಇಲಾಖೆ ಮೂಲಗಳು ಎಚ್ಚರಿಕೆ ನೀಡಿವೆ.

2008ರ ಮುಂಬೈ ದಾಳಿಯ ರೂವಾರಿ ಲಷ್ಕರ್ ಸಂಘಟನೆ ಮತ್ತೆ ಭಾರತದ ವಿರುದ್ಧ ದಾಳಿಗೆ ಸಜ್ಜಾಗಿದ್ದು, ಮುಂದಿನ ತಿಂಗಳಲ್ಲಿ ಭಾರಿ ವಿಧ್ವಂಸಕ್ಕೆ ಯೋಜನೆ ಹಾಕಿಕೊಂಡಿದೆ. ಈಗಗಾಲೇ ಈ ಸಂಬಂಧ ಉಗ್ರರನ್ನು ತರಬೇತುಗೊಳಿಸಿರುವ ಲಷ್ಕರ್ ಸಂಘಟನೆ, ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ಭಾರತಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ತನ್ನ ವಿಧ್ವಂಸಕ ಯೋಜನೆಯನ್ನು ಕಾರ್ಯರೂಪಕ್ಕೆ ತರಲಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ಗಣರಾಜ್ಯೋತ್ಸವ ದಿನಾಚರಣೆಗೆ ಆಹ್ವಾನಿಸಿದ್ದು, ಒಬಾಮ ಅವರು ಕೂಡ ಆಹ್ವಾನವನ್ನು ಸ್ವೀಕರಿಸಿ ಭಾರತಕ್ಕೆ ಬರಲು ಒಪ್ಪಿಗೆ ಸೂಚಿಸಿದ್ದಾರೆ. ಮುಂದಿನ ತಿಂಗಳು ಒಬಾಮ ಅವರು ಭಾರತಕ್ಕೆ ಆಗಮಿಸಲಿದ್ದು, ಇದೇ ಸಂದರ್ಭಕ್ಕಾಗಿ ಕಾಯುತ್ತಿರುವ ಲಷ್ಕರ್ ಸಂಘಟನೆ ಭಾರಿ ವಿದ್ವಂಸಕ  ಕೃತ್ಯ ಎಸಗಲು ಹವಣಿಸುತ್ತಿದೆ.

ಈ ನಡುವೆ ವಿದೇಶಿ ಗುಪ್ತಚರ ಇಲಾಖೆ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಗೃಹ ಇಲಾಖೆ, ಭಾರಿ ಭದ್ರತೆಗೆ ಮುಂದಾಗಿದೆ. ಅಲ್ಲದೇ ನಿನ್ನೆ ಪಾಕಿಸ್ತಾನದ ಪೇಶಾವರದ ಸೇನಾ ಶಾಲೆಯಲ್ಲಿ ನಡೆದ ಉಗ್ರದಾಳಿ ಹಿನ್ನಲೆಯಲ್ಲಿ ದೇಶಾದ್ಯಂತ ಕಟ್ಟೆಚ್ಚರ ವಹಿಸುವಂತೆ ಎಲ್ಲ ರಾಜ್ಯಗಳ ಪೊಲೀಸ್ ಇಲಾಖೆಗಳಿಗೆ ಸೂಚನೆ ನೀಡಿದೆ. ಇನ್ನು ಇತ್ತೀಚೆಗೆ ಮಧ್ಯಪ್ರದೇಶ ಜೈಲಿನಿಂದ ಪರಾರಿಯಾಗಿದ್ದ ಐವರು ಶಂಕಿತ ಉಗ್ರರ ಕುರಿತಂತೆ ತೀವ್ರ ಶೋಧ ನಡೆಸಲಾಗುತ್ತಿದ್ದು, ಗುಪ್ತಚರ ಇಲಾಖೆ ಕೂಡ ಈ ಐವರು ಶಂಕಿತರಿಗಾಗಿ ಶೋಧ ಕಾರ್ಯ ಆರಂಭಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel