ಸೋನಿಯಾ ಗಾಂಧಿ ಅವರು ದಾಖಲಾಗಿರುವ ದೆಹಲಿಯ ಗಂಗಾರಾಮ್ ಆಸ್ಪತ್ರೆ 
ದೇಶ

ಸೋನಿಯಾ ಪಡೆಯುತ್ತಿರುವುದು ಕಿಮೋಥೆರಪಿ ಚಿಕಿತ್ಸೆಯೇ?

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನಿಜಕ್ಕೂ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆಯೇ..

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನಿಜಕ್ಕೂ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆಯೇ ಅಥವಾ ಅವರಿಗೆ ಅದಕ್ಕಿಂತಲೂ ಗಂಭೀರವಾದ ಕಾಯಿಲೆ ಇದೆಯೇ?

ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ಕಿಮೋಥೆರಪಿ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ಅಚ್ಚರಿಯ ವಿಚಾರವನ್ನು ತೆಹಲ್ಕಾ ಬಹಿರಂಗಪಡಿಸಿದೆ. ಇದಕ್ಕೆ ಪುಷ್ಟ ನೀಡುವಂತೆ 2011ರಲ್ಲಿ ಅಮೆರಿಕದಲ್ಲಿ ಸೋನಿಯಾರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದ ಭಾರತೀಯ-ಅಮೆರಿಕನ್ ವೈದ್ಯ ದತ್ತಾತ್ರೇಯ ನೋರಿ ಅವರು ದಿಢೀರನೆ ದೆಹಲಿಗೆ ಆಗಮಿಸಿದ್ದಾರೆ.

ಗುರುವಾರ ಸಂಜೆ ಸೋನಿಯಾ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಡಾ.ನೋರಿ ಅವರು ಗಂಗಾರಾಮ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇವರು ನ್ಯೂಯಾರ್ಕ್‌ನ ಮೆಮೋರಿಯಲ್ ಸ್ಲೋನ್ ಕೆಟರಿಂಗ್ ಕ್ಯಾನ್ಸರ್ ಸೆಂಟರ್‌ನ ಪ್ರಮುಖ ವೈದ್ಯರಲ್ಲಿ ಇವರೂ ಒಬ್ಬರಾಗಿದ್ದು, ಕ್ಯಾನ್ಸರ್ ಚಿಕಿತ್ಸೆಯಲ್ಲಿ ಎತ್ತಿದ ಕೈ. ಶುಕ್ರವಾರ ಬೆಳ್ಳಂಬೆಳ್ಳಗ್ಗೆಯೇ ಗಂಗಾರಾಮ್ ಆಸ್ಪತ್ರೆಯ ಆವರಣದಲ್ಲಿ ಮಾಧ್ಯಮಗಳ ದಂಡೇ ನೆರೆದಿತ್ತು.

ಆದರೆ ಆಸ್ಪತ್ರೆಯ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಮಾತ್ರ ಸೋನಿಯಾ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದು, ಅವರು ಕಿಮೋಥೆರಪಿ ಚಿಕಿತ್ಸೆ ಪಡೆಯುತ್ತಿರುವುದನ್ನು ಮರೆಮಾಚಿದ್ದಾರೆ ಎಂದೂ ತೆಹಲ್ಕಾ ವರದಿಯಲ್ಲಿ ತಿಳಿಸಿದೆ. 2011ರಲ್ಲಿ ವಿದೇಶದಲ್ಲಿ ಸೋನಿಯಾ ಚಿಕಿತ್ಸೆ ಪಡೆದ ಸಂದರ್ಭದಲ್ಲೇ ಅವರ ಆರೋಗ್ಯದ ಬಗ್ಗೆ ಅಂತೆಕಂತೆಗಳು ಹುಟ್ಟಿದ್ದವು. ಆದರೆ ಎಲ್ಲ ಊಹಾಪೋಹಗಳನ್ನು ತಳ್ಳಿಹಾಕಿದ್ದ ಕಾಂಗ್ರೆಸ್, ಇದು ಸೋನಿಯಾರ ವೈಯುಕ್ತಿಕ ವಿಚಾರ ಎನ್ನುವು ಮೂಲಕ ಮೌನ ತಳೆದಿತ್ತು.

ಸೋನಿಯಾ ಚೇತರಿಕೆ
ನವದೆಹಲಿ:
ಶ್ವಾಸನಾಳದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಸೋನಿಯಾ ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದ್ದು, ನಿಧಾನವಾಗಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ರಾಷ್ಟ್ರಪತಿ ಡಿಸ್ಚಾರ್ಜ್
ಆ್ಯಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT