ನರೇಂದ್ರ ಮೋದಿ 
ದೇಶ

'ಘರ್ ವಾಪಸಿ' ಕಾರ್ಯಕ್ರಮದ ಬಗ್ಗೆ ಮೋದಿ ಅಸಮಾಧಾನ

'ಘರ್ ವಾಪಸಿ' ಮರುಮತಾಂತರ ಕಾರ್ಯಕ್ರಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ...

ನವದೆಹಲಿ: 'ಘರ್ ವಾಪಸಿ' ಮರುಮತಾಂತರ ಕಾರ್ಯಕ್ರಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶಾದ್ಯಂತ ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು 'ಘರ್ ವಾಪಸಿ' ಎಂಬ ಹೆಸರಿನಲ್ಲಿ ಮರುಮತಾಂತರ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಂದಾಗಿದ್ದರು. ಅದರಂತೆ ಗುಜರಾತ್ ನ ವಲ್ಸದ್ ಜಿಲ್ಲೆಯ ಅರ್ನಾಲಿ ಗ್ರಾಮದಲ್ಲಿ ಶನಿವಾರ 500 ಮಂದಿ ಬುಡಕಟ್ಟು ಕ್ರೈಸ್ತರನ್ನು ಹಿಂದು ಧರ್ಮಕ್ಕೆ ಮರು ಮತಾಂತರಿಸಲಾಗಿತ್ತು. ಈ ಘಟನೆ ಕುರಿತು ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ವಿಶ್ವ ಹಿಂದು ಪರಿಷತ್ ಕಾರ್ಯಕರ್ತರ ಈ ನಿಲುವನ್ನು ಮೋದಿ ಖಂಡಿಸಿದ್ದು, ಕಾರ್ಯಕ್ರಮದ ಬಗ್ಗೆ ಮೋದಿ ವಿಶ್ವ ಹಿಂದೂ ಪರಿಷತ್ ಹಿರಿಯ ಮುಖಂಡರೊಂದಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಶತ್ ಹಿರಿಯ ಮುಖಂಡರು ಮರುಮತಾಂತರ ಕಾರ್ಯಕ್ರಮ 'ಘರ್ ವಾಪಸಿ'ಯನ್ನು ಸ್ಥಗಿತಗೊಳಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!