ದೇಶ

ನಾಳೆ ಫಲಿತಾಂಶ: ಎಲ್ಲರ ಚಿತ್ತ ಜಮ್ಮು, ಕಾಶ್ಮೀರ ಹಾಗೂ ಜಾರ್ಖಂಡ್‌ನತ್ತ

Lingaraj Badiger

ಶ್ರೀನಗರ/ರಾಂಚಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಹಾಗೂ ಜಾರ್ಖಂಡ್ ವಿಧಾನಸಭೆ ಚುವಾವಣೆಯ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ಮತ ಎಣಿಕೆ ಪ್ರಕ್ರಿಯೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಭಾರಿ ಭದ್ರತೆಯೊಂದಿಗೆ ಎರಡು ರಾಜ್ಯಗಳಲ್ಲಿ ನಡೆದ ಐದು ಹಂತದ ಮತದಾನ ಪ್ರಕ್ರಿಯೆಯಲ್ಲಿ ಶೇ.66ರಷ್ಟು ಮತದಾನವಾಗಿತ್ತು.

ನಾಳೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ದೊರೆಯಲಿದೆ. ಮತ ಎಣಿಕೆ ಕೇಂದ್ರಗಳ ಸುತ್ತ ಸೂಕ್ತ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮ ಮತ್ತು ಕಾಶ್ಮೀರದ 87 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಪ್ರತ್ಯೇಕತಾ ವಾದಿಗಳ ಬಹಿಷ್ಕಾರದ ನಡುವೆಯೂ ಈ ಚುನಾವಣೆಯಲ್ಲಿ 1987ರ ನಂತರ ನಡೆದ ಎಲ್ಲಾ ಚುನಾವಣೆಗಳಿಗಿಂತಲೂ ಅತಿ ಹೆಚ್ಚು ಮತದಾನವಾಗಿದೆ.

ಕಣಿವೆಯಲ್ಲಿ ಪಿಡಿಪಿಗೆ ಬಹುಮತ
ಉಗ್ರರ ಹಾವಳಿಯಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ಮತದಾನ ನಡೆದಿದೆ. ಪ್ರತ್ಯೇಕತಾವಾದಿಗಳ ಬಹಿಷ್ಕಾರದ ನಡುವೆಯೂ ಜನರು ಉತ್ಸಾಹದಿಂದ ಹಕ್ಕು ಚಲಾಯಿಸಿದ್ದಾರೆ. ಈ ಐತಿಹಾಸಿಕ ಬೆಳವಣಿಗೆಯು ಬಿಜೆಪಿಗೆ ಲಾಭವಾಗಿ ಪರಿಣಮಿಸಲಿದೆ ಎಂದೇ ನಂಬಲಾಗಿದೆ. ಅದರಲ್ಲೂ ಜಮ್ಮುವಿನಲ್ಲಿ ಬಿಜೆಪಿಯು ಅತ್ಯಂತ ಹೆಚ್ಚು ಸೀಟುಗಳನ್ನು ಗಳಿಸಲಿದೆ ಎಂದೇ ನಿರೀಕ್ಷಿಸಲಾಗಿದೆ.

SCROLL FOR NEXT