ನಿರ್ದೇಶಕ ಕೆ ಬಾಲಚಂದರ್ 
ದೇಶ

ಖ್ಯಾತ ನಿರ್ದೇಶಕ ಕೆ ಬಾಲಚಂದರ್ ನಿಧನ

ಖ್ಯಾತ ಚಿತ್ರ ನಿರ್ದೇಶಕ ಕೆ ಬಾಲಚಂದರ್ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

ಚೆನ್ನೈ: ಖ್ಯಾತ ಚಿತ್ರ ನಿರ್ದೇಶಕ ಕೆ ಬಾಲಚಂದರ್ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

ತಮಿಳು ಮತ್ತು ತೆಲುಗು ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ ಕೆ ಬಾಲಚಂದರ್ ಅವರು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಬಾಲಚಂದರ್ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವಾರದ ಹಿಂದೆ ಚಿಕಿತ್ಸೆ ಚೆನ್ನಾಗಿಯೇ ಪ್ರತಿಕ್ರಿಯಿಸಿದ್ದ ಬಾಲಚಂದರ್ ಅವರನ್ನು ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಇಂದು ಸಂಜೆ ಸುಮಾರು 6.40ರಲ್ಲಿ ಅವರಿಗೆ ತೀವ್ರ ಹೃದಯಾಘಾತವಾಗಿದ್ದು, ಸಂಜೆ 7 ಗಂಟೆ ಸುಮಾರಿನಲ್ಲಿ ಅವರು ನಿಧನರಾಗಿದ್ದಾರೆ ಎಂದು ಮೂಲಗಳ ತಿಳಿಸಿವೆ.  ಬಾಲಚಂದರ್ ಅವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದ್ದು, ರಜನಿಕಾಂತ್, ಖುಷ್ಬು, ಕಮಲ್ ಹಾಸನ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ.

ಬಾಲಚಂದರ್ ಅವರಿಗೆ ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿ ಇದ್ದು, ಈ ಪೈಕಿ ಹಿರಿಯ ಮಗ ಕೈಲಾಸಂ ಕೆಲ ತಿಂಗಳ ಹಿಂದಷ್ಟೇ ನಿಧನರಾಗಿದ್ದರು. ಅವರ ಎರಡನೇ ಪುತ್ರ ಪ್ರಸನ್ನ ಮತ್ತು ಪುತ್ರಿ ಚೆನ್ನೈನಲ್ಲಿ ವಾಸಿಸುತ್ತಿದ್ದಾರೆ.

ತಮಿಳು, ತೆಲುಗು. ಮಲಯಾಳಂ, ಹಿಂದಿ ಮತ್ತು ಕನ್ನಡ ಭಾಷೆಗಳಲ್ಲಿ ಸುಮಾರು 100ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದ ಬಾಲಚಂದರ್ ಅವರು, ದಕ್ಷಿಣ ಭಾರತದ ಖ್ಯಾತ ನಟರಾದ ರಜನಿಕಾಂತ್, ಕಮಲ್ ಹಾಸನ್, ಕನ್ನಡದ ರಮೇಶ್ ಅರವಿಂದ್ ಮತ್ತು ಪ್ರಕಾಶ್ ರೈರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದರು.

ಜೆಮಿನಿ ಗಣೇಶನ್, ಎಂ.ಜಿ.ರಾಮಚಂದ್ರನ್, ರಾಜೇಶ್ ಖನ್ನಾ, ಸಾಹುಕಾರ್ ಜಾನಕಿ, ಶ್ರೀದೇವಿ, ಶಿವಾಜಿ ಗಣೇಶನ್, ಚಿರಂಜೀವಿ, ಲಕ್ಷ್ಮಿ, ಶಿವಕುಮಾರ್, ಮಮ್ಮೂಟಿಯಂತ ದೊಡ್ಡ ದೊಡ್ಡ ಕಲಾವಿದರಿಗೆ ಆಕ್ಷನ್ ಕಟ್ ಹೇಳಿದ ಖ್ಯಾತಿ ಕೆ.ಬಾಲಚಂದರ್ ರದ್ದು. ಐದು ದಶಕಗಳ ತಮ್ಮ ಸುದೀರ್ಘ ಸಿನಿಪಯಣದಲ್ಲಿ 9 ರಾಷ್ಟ್ರ ಪ್ರಶಸ್ತಿ, ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನ ಮುಡಿಗೇರಿಸಿಕೊಂಡಿದ್ದಾರೆ.

ಕೆ.ಬಾಲಚಂದರ್ ನಿರ್ದೇಶನದ ಬ್ಲಾಕ್ ಬಸ್ಟರ್ ಚಿತ್ರಗಳ ಪಟ್ಟಿ -
1964 - ದೈವ ತಾಯೈ
1975 - ಅಪೂರ್ವ ರಾಗಂಗಳ್
1975 - ಮನ್ಮಧ ಲೀಲೈ
1976 - ಅಥುಲೇನಿ ಕಥಾ
1976 - ಮೂನ್ಡ್ರು ಮುಡಿಚು
1978 - ಮರೋ ಚರಿತ್ರ
1978 - ತಪ್ಪು ತಾಳಂಗಳ್
1978 - ತಪ್ಪಿದ ತಾಳ
1979 - ಅಂದಮೈನ ಅನುಭವಂ
1979 - ಇದಿ ಕಥ ಕಾದು
1982 - ಬೆಂಕಿಯಲ್ಲಿ ಅರಳಿದ ಹೂವು
1985 - ಮುಗಿಲ ಮಲ್ಲಿಗೆ
1986 - ಸುಂದರ ಸ್ವಪ್ನಗಳು
2006 - ಪೋಯಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT