ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ 
ದೇಶ

ಜಮ್ಮು ಕಾಶ್ಮೀರದಲ್ಲಿ ಸರ್ಕಾರ ರಚನೆ ಕಸರತ್ತು

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಂತಿಮ ನಿರ್ಧಾರ ತೆಗೆದುಕೊಳ್ಳುವರು...

ಜಮ್ಮು: ಜಮ್ಮು ಕಾಶ್ಮೀರದಲ್ಲಿ ಸರ್ಕಾರ ರಚನೆ ಕಸರತ್ತು ಮುಂದುವರೆದಿದ್ದು, ಬಿಜೆಪಿ ಪಕ್ಷೇತರ ಶಾಸಕರ ಮೊರೆ ಹೋಗಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ,
ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಸರ್ಕಾರ ರಚಿಸುವ ಕುರಿತು ಅತೀ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದ್ದೇವೆ. ಈ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಂತಿಮ ನಿರ್ಧಾರ ತೆಗೆದುಕೊಳ್ಳುವರು ಎಂದು ವಿವರಿಸಿದರು.

ಈಗಾಗಲೇ ನಾನು ಪಕ್ಷೇತರ ಶಾಸಕರನ್ನು ಸಂಪರ್ಕಿಸಿದ್ದು, ಯಾರನ್ನು ವಿಧಾನಸಭೆಯ ನಾಯಕನನ್ನಾಗಿ ಮಾಡುವುದು ಎಂಬುದರ ಕುರಿತು ಎಲ್ಲ ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಆದ್ದರಿಂದ ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ರಚನೆಗೆ ಎಲ್ಲ ಅವಕಾಶಗಳು ಲಭ್ಯವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗಿಂತ ಪ್ರಾದೇಶಿಕ ಪಕ್ಷವಾದ ಪಿಡಿಪಿಯು ಹೆಚ್ಚು ಸ್ಥಾನಗಳನ್ನು ಗಳಿಸಿದ್ದರು, ಬಿಜೆಪಿ ಅತಿ ಹೆಚ್ಚು ಮತಗಳನ್ನು ಪಡೆದಿರುವುದು ಸಂತಸ ತಂದಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video