ರಾಂಚಿ: ಜಾರ್ಖಂಡ್‌ನಲ್ಲಿ ಪ್ರಪ್ರಥಮವಾಗಿ ಆದಿವಾಸಿಯೇತರ ಮುಖ್ಯಮಂತ್ರಿಯಾಗಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ರಘುವರ್ ದಾಸ್ ಅಧಿಕಾರದ ಗದ್ದುಗೆ ಏರಿವುದು ಬಹುತೇಕ ಖಚಿತವಾಗಿದೆ.
ಜಮ್‌ಶೆಡ್ ಪುರ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ರಘುವರ್ ದಾಸ್ ಅವರನ್ನು ಜಾರ್ಖಂಡ್‌ನ ಮುಖ್ಯಮಂತ್ರಿಯನ್ನಾಗಿ ಮಾಡಲು ಬಿಜೆಪಿ ಸಂಸದೀಯ ಮಂಡಳಿ ತೀರ್ಮಾನಿಸಿದೆ. ಶಾಸಕರ ಅಭಿಪ್ರಾಯವನ್ನು ಪಡೆಯಲು ಇಂದು ಸಂಜೆ ರಾಂಚಿಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಜೆ.ಪಿ.ನಡ್ಡಾ ಸೇರಿದಂತೆ ಪ್ರಮುಖ ನಾಯಕರು ತೆರಳಿದ್ದಾರೆ.
ಬಹುತೇಕ ಶಾಸಕರು ರಘುವರ್ ದಾಸ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಪಟ್ಟಕ್ಕೇರಿಸಲು ಸಮ್ಮತಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನವಾರ ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿ ರಘುವರ್ ದಾಸ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇವರೊಂದಿಗೆ 12 ಮಂದಿ ಸಚಿವರೂ ಕೂಡ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.