ದೇಶ

ಆತ್ಮರಕ್ಷಣೆಗಾಗಿ ಮಹಿಳೆಯರಿಗೆ ಮಾರ್ಷಲ್ ಆರ್ಟ್ಸ್ ಕಲಿಕೆ: ಸಿಎಂ ಅಖಿಲೇಶ್

Vishwanath S

ಲಖನೌ: ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಮಹಿಳೆಯರ ರಕ್ಷಣೆಗಾಗಿ ಉತ್ತರಪ್ರದೇಶ ಮಹಿಳೆಯರಿಗೆ ಮಾರ್ಷಲ್ ಆರ್ಟ್ಸ್ ಕಲಿಸಲು ಮುಂದಾಗಿದೆ.

ಮಹಿಳೆಯರ ರಕ್ಷಣೆ ಕುರಿತಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಮಹಿಳೆಯರಿಗೆ ಮಾರ್ಷಲ್ ಆರ್ಟ್ಸ್ ಕಲಿಸಲು ತೀರ್ಮಾನಿಸಲಾಗಿದ್ದು, ಮಹಿಳೆಯರು ಮುಂದೆ ಬಂದ ಮಾರ್ಷಲ್ ಆರ್ಟ್ಸ್ ತರಬೇತಿ ಪಡೆಯಿರಿ ಎಂದು ಸೂಚಿಸಿದ್ದಾರೆ.

ಮುಖ್ಯವಾಗಿ ಯುವತಿಯರ ಮೇಲೆ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿಯೂ ಮಾರ್ಷಲ್ ಆರ್ಟ್ಸ್ ಕಲಿಸುವಂತೆ ಸೂಚಿಸಲಾಗಿದೆ ಎಂದು ಅಖಿಲೇಶ್ ಯಾದವ್ ತಿಳಿಸಿದ್ದಾರೆ.

ಸರಿಸುಮಾರು 10 ಸಾವಿರ ಹುಡುಗಿಯರಿಗೆ ಆತ್ಮರಕ್ಷಣೆ ಮಾಡಿಕೊಳ್ಳಲು ಮಾರ್ಷಲ್ ಆರ್ಟ್ಸ್ ಕಲಿಸಲಾಗುತ್ತದೆ. ಇದರೊಂದಿಗೆ ಮಹಿಳೆಯರು ಸ್ವತಃ ತಾವೇ ತಮ್ಮ ಆತ್ಮರಕ್ಷಣೆ ಮಾಡಿಕೊಳ್ಳಲು ಸಮರ್ಥರಾಗಬೇಕಾಗಿದ್ದು, ಅವರ ರಕ್ಷಣೆಗಾಗಿ ಸರ್ಕಾರ ಸೂಕ್ತ ಸಹಕಾರ ನೀಡುತ್ತದೆ ಎಂದರು.

SCROLL FOR NEXT