Azam Khan 
ದೇಶ

ತಾಜ್‌ಮಹಲ್ ಧ್ವಂಸಕ್ಕೆ ಬಿಜೆಪಿ ಸಂಚು: ಅಜಂ ಖಾನ್

ಮುಜಾಫರ್‌ನಗರ: ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಕೆಡವಿದಂತೆಯೇ ಆಗ್ರಾದ ತಾಜ್‌ಮಹಲ್ ಅನ್ನು ಧ್ವಂಸಗೊಳಿಸಲು ಬಿಜೆಪಿ ಸಂಚು ರೂಪಿಸಿದೆ.

ಇದು ಉತ್ತರಪ್ರದೇಶದ ಸಚಿವ ಅಜಂ ಖಾನ್ ಅವರ ವಿವಾದದ ಹೊಸ ವರಸೆ. ಇತ್ತೀಚೆಗಷ್ಟೇ ತಾಜ್‌ಮಹಲ್ ಅನ್ನು ವಕ್ಫ್ ಆಸ್ತಿ ಎಂದು ಘೋಷಿಸಬೇಕು ಎನ್ನುವ ಮೂಲಕ ವಿವಾದ ಸೃಷ್ಟಿಸಿದ್ದ ಅಜಂ ಖಾನ್ ಈಗ ಪ್ರೇಮಸೌಧವನ್ನು ಒಡೆಯಲು ಬಿಜೆಪಿ ಯೋಜನೆ ಹಾಕಿಕೊಂಡಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರವು ಯಾವುದೇ ಅಭಿವೃದ್ಧಿಕಾರ್ಯ ಮಾಡುತ್ತಿಲ್ಲ. ಬಿಜೆಪಿಯು ಅಪಾಯಕಾರಿ ಆಟ ಆಡುತ್ತಿದೆ. ಬಾಬರಿ ಮಸೀದಿ ಒಡೆದಂತೆ ತಾಜ್‌ಮಹಲ್ ಅನ್ನು ಒಡೆಯಲು ಸಂಚು ರೂಪಿಸುತ್ತಿದೆ. ಕೋಮುಗಳ ನಡುವೆ ಕಂದಕ ಸೃಷ್ಟಿಸಿ ದೇಶವನ್ನು ವಿಭಜಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ ಖಾನ್. ಇದೇ ವೇಳೆ ಮತಾಂತರ ವಿಚಾರ ಪ್ರಸ್ತಾಪಿಸಿದ ಅವರು, ಮೊಘಲರು, ಬ್ರಿಟಿಷರು ಕೂಡ ಮತಾಂತರಕ್ಕೆ ಯತ್ನಿಸಿ ವಿಫಲರಾಗಿದ್ದರು. ಜನರ ಧರ್ಮವನ್ನು ಬದಲಿಸಲು ಸಾಧ್ಯವಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!