ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಸಾವಿರಾರು ಮಂದಿಗೆ ಪಂಗನಾಮ ಹಾಕಿದ ಶಾರದಾ ಸಮೂಹ ಸಂಸ್ಥೆಗೆ ಮತ್ತೊಂದು ಸಂಕಷ್ಟು ಎದುರಾಗಿದೆ. ಅಸ್ಸಾಂನಲ್ಲಿ ಸಾವಿರಾರು ಮಂದಿಗೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಂಪನಿ ವಿರುದ್ಧ ಸಿಬಿಐ ಎರಡು ಪ್ರಕರಣಗಳನ್ನು ದಾಖಲಿಸಿದೆ.
ಶಾರದಾ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ(ಎಸ್‌ಎಟಿ) ಈ ಪ್ರಕರಣ ದಾಖಲಿಸಿದೆ. ಅಸ್ಸಾಂ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ತನಿಖಾ ಸಂಸ್ಥೆ ಈ ಕ್ರಮ ಕೈಗೊಂಡಿದೆ. ಶಾರದಾ ಸಮೂಹ ಸಂಸ್ಥೆಗಳ ವಿರುದ್ಧ ಈಗಾಗಲೇ ಆರು ಕೇಸುಗಳು ದಾಖಲಾಗಿವೆ.
ವಂಚನೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಸಾರಿಗೆ ಸಚಿವ ಮದನ್ ಮಿತ್ರಾ, ಟಿಎಂಸಿ ನಾಯಕರಾದ ಕುನಾಲ್ ಘೋಷ್, ಶ್ರೀಂಜಯ್ ಘೋಷ್ ಈಗಾಗಲೇ ಬಂಧಿತರಾಗಿದ್ದಾರೆ.