ನವದೆಹಲಿ: ಕರ್ನಾಟಕ ಹೈಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.
ವಕೀಲರಾಗಿ ವೃತ್ತಿ ಆರಂಭಿಸಿದ್ದ ಎಸ್. ಸುಜಾತ, ಬಿ. ವೀರಪ್ಪ, ಜಿ. ನರೇಂದ್ರ, ಪಿ.ಎಸ್ ದಿನೇಶ್‌ಕುಮಾರ್ ಹಾಗೂ ಪವನ್ ಕುಮಾರ್ ಭಜಂತ್ರಿ ಅವರು ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.
ನೇಮಕಗೊಂಡಿರುವ ನೂತನ ನ್ಯಾಯಮೂರ್ತಿಗಳು ಜನವರಿ 2ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹೈಕೋರ್ಟ್‌ನ ಹಾಲ್ 1ರಲ್ಲಿ ಬೆಳಗ್ಗೆ 10 ಗಂಟೆಗೆ ಪ್ರಮಾಣ ವಚನ ಸಮಾರಂಭ ಕಾರ್ಯಕ್ರಮ ನಡೆಯಲಿದ್ದು, ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದ ಡಿ. ಹೆಚ್ ವಘೇಲಾರು ಪ್ರಮಾಣ ವಚನ ಬೋಧಿಸಲಿದ್ದಾರೆ.