ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ(ಸಂಗ್ರಹ ಚಿತ್ರ) 
ದೇಶ

ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಸರ್ಕಾರ ಸಾಧ್ಯತೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಮತ್ತು ಬಿಜೆಪಿ ಮೈತ್ರಿ ಸರ್ಕಾರ ರಚನೆಯಾಗವುದು ಬಹುತೇಕ ಖಚಿತವೆಂದು ಮೂಲಗಳು ತಿಳಿಸಿವೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಮತ್ತು ಬಿಜೆಪಿ ಮೈತ್ರಿ ಸರ್ಕಾರ ರಚನೆಯಾಗವುದು ಬಹುತೇಕ ಖಚಿತವೆಂದು ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಉಂಟಾಗಿದ್ದ ಸರ್ಕಾರ ರಚನೆ ಬಿಕ್ಕಟ್ಟು ಶೀಘ್ರದಲ್ಲಿಯೇ ಅಂತ್ಯವಾಗುವ ಸಂಭವವಿದ್ದು, ಪಿಡಿಪಿ ಮತ್ತು ಬಿಜೆಪಿ ಪಕ್ಷಗಳ ನೇತೃತ್ವದ ಮೈತ್ರಿ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದೆ. ಇನ್ನು ಇದಕ್ಕೆ ಪೂರಕ ಎಂಬಂತೆ ಪಿಡಿಪಿ ಪಕ್ಷದ ಮುಖ್ಯಸ್ಥೆ ಮೆಹಬೂಬ ಮುಫ್ತಿ ಅವರು ನೀಡಿರುವ ಹೇಳಿಕೆಗಳು ಇದಕ್ಕೆ ಇಂಬು ನೀಡಿವೆ.

ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಶ್ಲಾಘಿಸಿದ ಮುಫ್ತಿ ಅವರು, ವಾಜಪೇಯಿ ಅವರು ದೂರದೃಷ್ಟಿವುಳ್ಳ ಜವಾಬ್ದಾರಿಯುತ ವ್ಯಕ್ತಿಯಾಗಿದ್ದು, ಅವರ ನೀತಿಗಳನ್ನು ನಾವು ಮತ್ತೆ ವಾಪಸ್ ತರಬೇಕಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಚ್ಚಿನ ಜವಾಬ್ದಾರಿ ಇದ್ದು, ಮೋದಿ ಅವರು ಅದನ್ನು ನಿಭಾಯಿಸಬಲ್ಲರು. ರಾಜ್ಯಕ್ಕೆ ವಾಜಪೇಯಿ ಅವರ ವಿಧಾನ ಬೇಕಿದೆ ಎಂದು ಮುಫ್ತಿ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಪಿಡಿಪಿ ಪಕ್ಷದೊಂದಿಗೆ ಕೈ ಜೋಡಿಸುವ ಕುರಿತು ಬಿಜೆಪಿ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆಯಾದರೂ ತೆರೆ ಮರೆಯಲ್ಲಿ ಸರ್ಕಾರ ರಚನೆ ಕಸರತ್ತು ಕೂಡ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT