ನವದೆಹಲಿ: ಹೊಸ ವರ್ಷಾಚರಣೆ ವೇಳೆ ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗುವ ಉದ್ದೇಶದಿಂದ 10 ಮಂದಿ ಉಗ್ರರು ರಾಷ್ಟ್ರ ರಾಜಧಾನಿ ದೆಹಲಿಗೆ ನುಸುಳಿರುವ ಶಂಕೆಯನ್ನು ಕೇಂದ್ರ ಗುಪ್ತಚರ ಇಲಾಖೆ ವ್ಯಕ್ತಪಡಿಸಿದೆ.
ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗುವುದಾಗಿ ಈ ಹಿಂದೆ ಉಗ್ರ ಸಂಘಟನೆಗಳು ಬೆದರಿಕೆ ಹಾಕಿದ್ದವು. ಇದೇ ಉದ್ದೇಶದಿಂದ ಪಾಕಿಸ್ತಾನದಿಂದ 10 ಮಂದಿ ಉಗ್ರರು ದೆಹಲಿಗೆ ನುಸುಳಿದ್ದಾರೆ ಎಂಬ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದ್ದು, ಈ ನಿಟ್ಟಿನಲ್ಲಿ ಗಾಜಿಯಾಬಾದ್‌ನಲ್ಲಿ ಉಗ್ರರಿಗಾಗಿ ಪೊಲೀಸರು ತೀವ್ರ ಶೋಧಕಾರ್ಯ ನಡೆಸಿದ್ದಾರೆ.
ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ಕಟ್ಟೇಚ್ಚರ ವಹಿಸಲಾಗಿದ್ದು, 200 ಪೊಲೀಸರ ತಂಡ ಗಾಜಿಯಬಾದ್‌ನಲ್ಲಿ ಉಗ್ರರಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.