ಬೆಮೆಲ್ ನಿಷೇಧ ಆಂಶಿಕ ತೆರವು
ರಕ್ಷಣಾ ಇಲಾಖೆಯ ಸಿಬ್ಬಂದಿ ಮಧ್ಯವರ್ತಿಗಳಾಗಿ ಕೆಲಸ ಮಾಡುವುದಕ್ಕೆ ಅವಕಾಶ ಕೊಡಲಾಗುವುದಿಲ್ಲ...
ನವದೆಹಲಿ: ರಕ್ಷಣಾ ಖರೀದಿ ನೀತಿಯನ್ನು ಕೇಂದ್ರ ಸರ್ಕಾರ ಬುಧವಾರ ಅಂತಿಮ ಪಡಿಸಿದೆ. ಅದಕ್ಕೆ ಪೂರಕವಾಗಿ ಟಟ್ರಾ ಟ್ರಕ್ಗೆ ಬಿಡಿ ಭಾಗಗಳನ್ನು ಪೂರೈಕೆ ಮಾಡದಂತೆ ಬೆಮೆಲ್ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ.
ಆದರೆ, ತನ್ನ ಬ್ರಿಟನ್ ಪಾಲುದಾರ ಕಂಪನಿ ಜತೆ ವಹಿವಾಟು ನಡೆಸದಂತೆ ಕೇಂದ್ರ ಸರ್ಕಾರ ತಾಕೀತು ಮಾಡಿದೆ. ಇದರ ಜತೆಗೆ ಹೊಸ ನೀತಿಯಲ್ಲಿ ಮಧ್ಯ ವರ್ತಿಗಳಿಗೆ ಅವಕಾಶ ನೀಡಲಾಗಿದೆ.
ಆದರೆ ರಕ್ಷಣಾ ಇಲಾಖೆಯ ಸಿಬ್ಬಂದಿ ಮಧ್ಯವರ್ತಿಗಳಾಗಿ ಕೆಲಸ ಮಾಡುವುದಕ್ಕೆ ಅವಕಾಶ ಕೊಡಲಾಗುವುದಿಲ್ಲ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ.
ಪರಿಕ್ಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹೊಸ ನೀತಿಗೆ ಒಪ್ಪಿಗೆ ಸೂಚಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.