ಮುಂಬೈ ಸ್ಫೋಟ ರೂವಾರಿ ಉಗ್ರ ಝಕಿವುರ್ ರೆಹಮಾನ್ ಲಖ್ವಿ (ಸಂಗ್ರಹ ಚಿತ್ರ) 
ದೇಶ

ಲಖ್ವಿಗೆ ಜಾಮೀನು ಪ್ರಶ್ನಿಸಿ 'ಪಾಕ್‌' ಅರ್ಜಿ

ಝಕಿವುರ್ ರೆಹಮಾನ್ ಲಖ್ವಿಗೆ ಜಾಮೀನು ನೀಡಿರುವ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಪಾಕಿಸ್ತಾನ ಸರ್ಕಾರ ಅರ್ಜಿ ಸಲ್ಲಿಸಿದೆ.

ಇಸ್ಲಾಮಾಬಾದ್: ಮುಂಬೈ ದಾಳಿ ರೂವಾರಿ ಮತ್ತು ಜಮಾತ್ ಉದ್ ದವಾ ಮುಖ್ಯಸ್ಥ ಝಕಿವುರ್ ರೆಹಮಾನ್ ಲಖ್ವಿಗೆ ಜಾಮೀನು ನೀಡಿರುವ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಪಾಕಿಸ್ತಾನ ಸರ್ಕಾರ ಅರ್ಜಿ ಸಲ್ಲಿಸಿದೆ.

ಭಯೋತ್ಪಾದನಾ ನಿಗ್ರಹ ವಿಶೇಷ ನ್ಯಾಯಾಲಯ ಲಖ್ವಿಗೆ ನೀಡಿರುವ ಜಾಮೀನನ್ನು ಪ್ರಶ್ನಿಸಿ ಪಾಕಿಸ್ತಾನದ ಆಂತರಿಕ ಸಚಿವಾಲಯ ಪಾಕಿಸ್ತಾನ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಈ ಹಿಂದೆ ಉಗ್ರ ಲಖ್ವಿಗೆ ಜಾಮೀನು ದೊರೆಯುತ್ತಿದ್ದಂತೆಯೇ ಭಾರತ ಮತ್ತು ವಿಶ್ವಸಮುದಾಯದ ಒತ್ತಾಯಕ್ಕೆ ಮಣಿದಿದ್ದ ಪಾಕಿಸ್ತಾನ ಸರ್ಕಾರ ಕಾನೂನು ಸುವ್ಯವಸ್ಥೆ ವಿಚಾರ ಮುಂದಿಟ್ಟು ಆತನನ್ನು ಬಂಧನಕ್ಕೊಳಪಡಿಸಿತ್ತು.

ಆದರೆ ಉಗ್ರ ಲಖ್ವಿ ಪಾಕಿಸ್ತಾನ ಸರ್ಕಾರದ ಈ ನಿರ್ಧಾರವನ್ನು ಇಸ್ಲಾಮಾಬಾದ್ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕಳೆದ ವಾರ ಆತನ ವಿರುದ್ಧ ಬಂಧನ ಆದೇಶವನ್ನು ಅಮಾನತುಗೊಳಿಸಿತ್ತು.

ಇಸ್ಲಾಮಾಬಾದ್ ನ್ಯಾಯಾಲಯದ ಆದೇಶದಿಂದ ಲಖ್ವಿ ಹೊರಬರುತ್ತಾನೆ ಎಂದೇ ಭಾವಿಸಲಾಗಿತ್ತು. ಈ ಮಧ್ಯೆ ಲಖ್ವಿ ವಿರುದ್ಧ ಮತ್ತೆ ಹೊಸ ಕೇಸ್ ದಾಖಲಿಸಿದ ಪಾಕ್ ಸರ್ಕಾರ ಆತನನ್ನು ಮತ್ತೆ ಬಂಧನಕ್ಕೊಳಪಡಿಸಿತು. ಅನ್ವರ್ ಎಂಬಾತನನ್ನು ಅಪಹರಣ ಮಾಡಿದ ಆರೋಪದ ಮೇಲೆ ಉಗ್ರ ಲಖ್ವಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಮುಂಬೈ ದಾಳಿ ಪ್ರಕರಣದ ರೂವಾರಿಯಾಗಿರುವ ಲಖ್ವಿಯನ್ನು 2009ರಿಂದಲೂ ರಾವಲ್‌ಪಿಂಡಿ ಜೈಲಿನಲ್ಲಿಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT