ಗೋವಾ: ಗೋವಾ ಸಿಎಂ ಮನೋಹರ್ ಪರಿಕ್ಕರ್ ಇಂದು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿದರು. ಕೇಂದ್ರ ಸಚಿವ ಸಂಪುಟದಲ್ಲಿ ಸೇರ್ಪಡೆಗೊಳ್ಳಲಿರುವ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ. ನಾಳೆ ಪರಿಕ್ಕರ್ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದು, ನೂತಕ ಕೇಂದ್ರ ಸಚಿವರಾಗಿ ಪರಿಕ್ಕರ್ ಸೇರ್ಪಡೆಯಾಗಲಿದ್ದಾರೆ. ಕೇಂದ್ರ ಸಚಿವ ಸಂಪುಟದಲ್ಲಿ ಮನೋಹರ್ ಪರಿಕ್ಕರ್ ಅವರಿಗೆ ಮಹತ್ವದ ಖಾತೆ ನೀಡಲಿರುವುದಾಗಿ ಮಾಹಿತಿ ಬಹಿರಂಗವಾಗಿದೆ.
ಇನ್ನೂ ತೆರವಾಗಿರುವ ಸಿಎಂ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿದೆ. ಸಿಎಂ ರೇಸ್ ನಲ್ಲಿ ಪ್ರಮುಖವಾಗಿ ಮೂವರು ನಾಯಕರ ಹೆಸರು ಕೇಳಿಬರುತ್ತಿದೆ. ಆ ಪೈಕಿ ಗೋವಾ ಉಪಮುಖ್ಯಮಂತ್ರಿ ಫ್ರಾನ್ಸಿಸ್ ಡಿಸೋಜಾ ಪ್ರಮುಖರಾಗಿದ್ದಾರೆ. ತನಗೆ ಸಿಎಂ ಸ್ಥಾನ ನೀಡದಿದ್ದರೆ ತಮ್ಮ ಡಿಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಡಿಸೋಜಾ ಬೆಂಬಲಕ್ಕೆ ಸುಮಾರು 12 ಬಿಜೆಪಿ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಇತ್ತರ ಆರೋಗ್ಯ ಸಚಿವ ಲಕ್ಷೀಕಾಂತ್ ಪರ್ಸೇಕರ್ ಸಿಎಂ ಆಕಾಂಕ್ಷಿ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ. ಅಲ್ಲದೇ ಗೋವಾ ವಿಧಾನಸಭಾ ಸ್ಪೀಕರ್ ಸಹಾ ಮುಖ್ಯಮಂತ್ರಿ ಗಾದಿಗಾಗಿ ಬೇಡಿಕೆಯನ್ನೊಡ್ಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಯಾರಿಗೆ ಮುಖ್ಯಮಂತ್ರಿ ಪಟ್ಟ ನೀಡಲಿದೆ ಎಂಬುದು ಕುತೂಹಲ ಕೆರಳಿಸಿದೆ.