ಸಾಂದರ್ಭಿಕ ಚಿತ್ರ 
ದೇಶ

32 ಬಾಲಕಿಯರ ಮೇಲೆ ಅತ್ಯಾಚಾರಗೈದ ಶಿಕ್ಷಕನ ಬಂಧನ

ಒಂದಲ್ಲ ಎರಡಲ್ಲ ಬರೋಬ್ಬರಿ 32 ಮಕ್ಕಳ ಮೇಲೆ ಅತ್ಯಾಚಾರವೆಸಗಿರುವ ಶಿಕ್ಷಕ...

ಮಿಜೋರಾಂ: ಒಂದಲ್ಲ ಎರಡಲ್ಲ ಬರೋಬ್ಬರಿ 32 ಮಕ್ಕಳ ಮೇಲೆ ಅತ್ಯಾಚಾರವೆಸಗಿರುವ ಶಿಕ್ಷಕ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಬೇಲಿಯೇ ಎದ್ದು ಹೊಲ ಮೇಯ್ದಂತೆ, ಶಿಕ್ಷಕನೊಬ್ಬ 32 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಗೈದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೀಜೋರಾಂನ ಚಾಂಫೈನ ಸೈಚಾಲ್ ಹಳ್ಳಿಯಲ್ಲಿ 32 ಮಕ್ಕಳ ಮೇಲೆ ಅತ್ಯಾಚಾರಗೈದಿರುವ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

ಲಾಲ್ ಮಿಂಗ್ ಮಾವಿಯಾ(30) ಬಂಧಿತ ಆರೋಪಿ. ಈತನ ವಿರುದ್ಧ ಅತ್ಯಾಚಾರಕ್ಕೊಳಗಾದ ಇಬ್ಬರು ಮಕ್ಕಳ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆರೋಪಿಯನ್ನು ಬಂಧಿಸಿದ ಪೊಲೀಸರು ಆತನನ್ನು ವಿಚಾರಣೆಗೊಳಪಡಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟ ಶಿಕ್ಷಕ, ಶಾಲೆಯ 32 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿರುವುದಾಗಿ ಹೇಳಿದ್ದಾನೆ.  

ಕಳೆದ 3 ವರ್ಷಗಳಿಂದ 8ರಿಂದ 12 ವರ್ಷದ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವೆಸಗಿ ಮಕ್ಕಳಿಗೆ ಶಿಕ್ಷಕ ಬೆದರಿಕೆ ಹಾಕಿದ್ದನು. ಆರೋಪಿ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಜೈಲಿಗೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!