ದೇಶ

ಬಿಜೆಪಿ ಜತೆ ಕೈಜೋಡಿಸಲು ಇಷ್ಟವಿಲ್ಲ: ಶಿವಸೇನೆ

ಬಿಜೆಪಿಗೆ ಬೆಂಬಲ ನೀಡಲು ತಮಗೆ ಇಷ್ಟವಿಲ್ಲ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಭಾನುವಾರ ಹೇಳಿದ್ದಾರೆ.

ಮುಂಬೈ: ಬಿಜೆಪಿಗೆ ಬೆಂಬಲ ನೀಡಲು ತಮಗೆ ಇಷ್ಟವಿಲ್ಲ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಭಾನುವಾರ ಹೇಳಿದ್ದಾರೆ.

ಇಂದು ನವದೆಹಲಿಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಳಿಕ ನಡೆದ ನಾಟಕೀಯ ಬೆಳವಣಿಗೆಗಳನ್ನು ಹಿನ್ನಲೆಯಾಗಿಟ್ಟುಕೊಂಡು ಮುಂಬೈನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಉದ್ಧವ್ ಠಾಕ್ರೆ ಅವರು, ಬಿಜೆಪಿಗೆ ಬೆಂಬಲ ನೀಡಲು ತಮಗೆ ಇಷ್ಟವಿಲ್ಲ. ಸೈದ್ದಾಂತಿಕವಾಗಿ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳು ಒಂದೇ ಆಗಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿಗೆ ಬೆಂಬಲ ನೀಡಲು ಸಿದ್ಧ. ಆದರೆ ಬಿಜೆಪಿ ಪಕ್ಷ ಸಿದ್ದಾಂತವನ್ನು ಬದಿಗಿಟ್ಟು ಎನ್‌ಸಿಪಿ ಪಕ್ಷದ ಬೆಂಬಲ ಪಡೆಯುವುದಾದರೆ ನಾವು ವಿರೋಧ ಪಕ್ಷದಲ್ಲಿ ಕೂರಲು ಸಿದ್ಧರಿದ್ದೇವೆ ಎಂದು ಹೇಳಿದರು.

ಅಂತೆಯೇ ಬಿಜೆಪಿ ಎನ್‌ಸಿಪಿ ಪಕ್ಷದ ಬೆಂಬಲ ಪಡೆಯಲು ಸಿದ್ಧವಿದೇಯೇ ಎಂಬುದನ್ನು ಖಚಿತಪಡಿಸಬೇಕು. ಅವರ ನಿರ್ಧಾರದ ಮೇಲೆ ನಮ್ಮ ತೀರ್ಮಾನ ಅವಲಂಬಿತವಾಗಿದೆ. ತಮಗಂತೂ ಬಿಜೆಪಿಗೆ ಬೆಂಬಲ ನೀಡಲು ಸ್ವಲ್ಪವೂ ಇಷ್ಟವಿಲ್ಲ. ಆದರೆ ಬಿಜೆಪಿ ಪಕ್ಷ ಎನ್‌ಸಿಪಿಯ ಬೆಂಬಲ ಪಡೆಯುತ್ತದೆಯೇ ಎಂದು ಮೊದಲು ಸ್ಪಷ್ಟಪಡಿಸಲಿ ಎಂದು ಸವಾಲು ಹಾಕಿದರು.

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರಕ್ಕೆ ತಾವು ವಿಷಯಾಧಾರಿತ ಬೆಂಬಲ ನೀಡಲು ಸಿದ್ಧ. ಆದರೆ ನಾವು ಮಹಾರಾಷ್ಟ್ರದಲ್ಲಿ ನ್ಯಾಯ ಎತ್ತಿಹಿಡಿದಿದ್ದೇವೆ. ನಮ್ಮ ಸೈದ್ಧಾಂತಿಕ ನಿಲುವುಗಳನ್ನು ಪಕ್ಕಕ್ಕಿಟ್ಟು ರಾಜಕೀಯ ಮಾಡಲು ನಾವು ಸಿದ್ಧರಿಲ್ಲ. ಅಧಿಕಾರವಿಲ್ಲದಿದ್ದರೂ ಪರವಾಗಿಲ್ಲ. ರಾಜ್ಯದ ಜನತೆಯ ಪರವಾಗಿ ಕೆಲಸ ಮಾಡುತ್ತೇವೆ. ರಾಜ್ಯ ವಿಭಜನೆಗೆ ನಮ್ಮ ಪ್ರಾಣ ಹೋದರೂ ನಾವು ಅವಕಾಶ ನೀಡುವುದಿಲ್ಲ. ಹಿಂದೂ ವಿರೋಧಿ ಕೃತ್ಯಗಳಿಗೆ ನಮ್ಮ ವಿರೋಧ ಮೊದಲಿನಿಂದಲೂ ಇದ್ದು, ಮುಂದೆಯೂ ಮುಂದುವರೆಯುತ್ತದೆ. ಪಕ್ಷದ ಮುಖಂಡ ಸುರೇಶ್ ಪ್ರಭು ಅವರು ಪಕ್ಷವನ್ನು ತ್ಯಜಿಸಿದ್ದು, ದುರದೃಷ್ಟಕರ ಸಂಗತಿಯಾಗಿದೆ ಎಂದು ಉದ್ಧವ್ ಹೇಳಿದರು.

ಇನ್ನು ಕೇಂದ್ರದ ವಿಚಾರವಾಗಿ ಮಾತನಾಡಿದ ಉದ್ಧವ್ ಠಾಕ್ರೆ ಅವರು, ಅನಂತ್ ಗೀತೆ ಅವರ ವಿಚಾರದ ಕುರಿತು ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು. ಇನ್ನು ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕರಾಗಿ ಏಕನಾಥ್ ಶಿಂಧೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!