ದೇಶ

ಮರಣದಂಡನೆಗೆ ಗುರಿಯಾಗಿದ್ದ 5 ಮೀನುಗಾರರು ಶೀಘ್ರ ಭಾರತಕ್ಕೆ ಹಸ್ತಾಂತರ?

Vishwanath S

ನವದೆಹಲಿ: ಶ್ರೀಲಂಕಾದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಐವರು ಭಾರತೀಯ ಮೀನುಗಾರರನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಸೋಮವಾರ ಸ್ಪಷ್ಟನೆ ನೀಡಿದ್ದಾರೆ.

ಮೀನುಗಾರರ ಮರಣದಂಡನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರೇ ಖುದ್ದಾಗಿ ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆಯವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಹೀಗಾಗಿ ಐವರು ಮೀನುಗಾರರ ಬಿಡುಗಡೆ ಸಾಧ್ಯವಾಗಿದೆ ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.

2011ರಲ್ಲಿ ರಾಮೇಶ್ವರದಾಚೆ ಸಮುದ್ರದಲ್ಲಿ ಮೀನು ಹಿಡಿಯಲು ಹೋಗಿದ್ದ 5 ಮೀನುಗಾರರು ಲಂಕಾ ನೌಕಾ ಪಡೆಗೆ ಸಿಕ್ಕಿಬಿದ್ದಿದ್ದರು. ಅಕ್ರಮವಾಗಿ ಮಾದಕ ದ್ರವ್ಯ ಸಾಗಣೆ ಮತ್ತು ಸಮುದ್ರ ಗಡಿ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕೊಲಂಬೋ ಹೈಕೋರ್ಟ್ ಗಲ್ಲು ಶಿಕ್ಷೆ ಕೂಡ ವಿಧಿಸಿದೆ. ಈ ಆದೇಶವನ್ನ ಪ್ರಶ್ನಿಸಿ ಶ್ರೀಲಂಕಾದ ಸುಪ್ರೀಂಕೋರ್ಟ್‌'ಗೆ ಮೇಲ್ಮನವಿ ಸಲ್ಲಿಸಲಾಗಿದೆ.

SCROLL FOR NEXT