ಪ್ರಣತಿ ಶಿಂಧೆ 
ದೇಶ

ಶಿಂಧೆ ಮಗಳಿಗೆ ಎಂಐಎಂ ನೋಟೀಸ್

ಮಾಜಿ ಕೇಂದ್ರ ಸಚಿವ ಸುಶೀಲ್ ಕುಮಾರ್ ಶಿಂಧೆ ಪುತ್ರಿ ಪ್ರಣತಿ ಶಿಂಧೆ ಅವರಿಗೆ...

ಮುಂಬೈ: ಮಾಜಿ ಕೇಂದ್ರ ಸಚಿವ ಸುಶೀಲ್ ಕುಮಾರ್ ಶಿಂಧೆ ಪುತ್ರಿ ಪ್ರಣತಿ ಶಿಂಧೆ ಅವರಿಗೆ ಮಜ್ಲೀಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(ಎಂಐಎಂ) ನೋಟೀಸ್ ಕಳುಹಿಸಿದೆ.

ಎಂಐಎಂ ಕುರಿತು ಪ್ರಣತಿ ಶಿಂಧೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಎಂಐಎಂ, ಪ್ರಣತಿ ಶಿಂಧೆ ಕೂಡಲೇ ಕ್ಷಮೆಯಾಚಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ.

ಕಳೆದ ವಾರ ಸೋಲಾಪುರ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ರಣತಿ ಶಿಂಧೆ, ಎಂಐಎಂ ಸಂಘಟನೆ ಧರ್ಮಗಳ ನಡುವೆ ಒಡಕು ತರುವ ಕಾರ್ಯ ಮಾಡುತ್ತಿದೆ. ಯಾವುದೇ ಪಕ್ಷವಾಗಲಿ ಧರ್ಮಗಳ ನಡುವೆ ಒಡಕು ತರಲೆತ್ನಿಸಿದರೆ ಅದು ಭಾರತದ ವಿರೋಧಿಯಾಗಿರುತ್ತದೆ ಎಂದು ಹೇಳಿದ್ದರು.

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಎಂಐಎಂ, ಎಂಟು ದಿನದೊಳಗಾಗಿ ಪ್ರಣತಿ ಶಿಂಧೆ ಕ್ಷಮೆಯಾಚಿಸಬೇಕು. ಇಲ್ಲವಾದರೆ, ನ್ಯಾಯಾಲಯದಲ್ಲಿ ಪ್ರಣತಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗವುದು ಎಂದು ಗಡುವು ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್