ದೇಶ

ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Mainashree

ನವದೆಹಲಿ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ದೆಹಲಿಯ ದ್ವಾರಕ ಪ್ರದೇಶದಲ್ಲಿ ನಡೆದಿದೆ.

ಭಾನುವಾರ ರಾತ್ರಿ ಅತಿಥಿ ಗೃಹದಲ್ಲಿ ನಾಲ್ವರು ಕಿಡಿಗೇಡಿಗಳು ವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹಣಕಾಸು ವಿಚಾರ ಸಂಬಂಧ ಮಾತುಕತೆ ನಡೆಸಲು ಅತಿಥಿ ಗೃಹಕ್ಕೆ ತೆರಳಿದ್ದ ಮಹಿಳೆ ಮೇಲೆ ಪರಿಚಿತ ನಾಲ್ಕು ಯುವಕರು ಅತ್ಯಾಚಾರವೆಸಗಿದ್ದಾರೆ ಎಂದು ತಿಳಿದು ಬಂದಿದೆ.

ಹಣ ಹಿಂದಿರುಗಿಸುವ ಬದಲು ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದಕ್ಷಿಣ ವಿಭಾಗದ ದ್ವಾರಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಕಾಸ್, ಅನಿಲ್ ಮತ್ತು ರಮೇಶ್ ಎಂಬುವವರನ್ನು ಬಂಧಿಸಲಾಗಿದೆ. ಮತ್ತೋರ್ವ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

SCROLL FOR NEXT