ಎಂ.ಎಸ್ ಧೋನಿ, ಪತ್ನಿ ಸಾಕ್ಷಿ(ಸಂಗ್ರಹ ಚಿತ್ರ) 
ದೇಶ

ತಂದೆ ಆಗಲಿರುವ ಧೋನಿ

ನವದೆಹಲಿ: ಬಾಲ್ಯದ ಗೆಳತಿ ಸಾಕ್ಷಿಯನ್ನು ವರಿಸಿದ್ದ ಭಾರತ ಕ್ರಿಕೆಟ್ ತಂಡದ ನಾಯಕ ಎಂ.ಎಸ್ ಧೋನಿ ಅವರು ಸದ್ಯದಲ್ಲೇ ತಂದೆಯಾಗಲಿದ್ದಾರೆ.

ಜುಲೈ 4, 2010ರಂದು ಹಸೆಮಣೆ ಹೇರಿದ್ದ ಎಂ.ಎಸ್ ಧೋನಿ ಹಾಗೂ ಸಾಕ್ಷಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ಸದ್ಯ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಗೆ ಧೋನಿ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸುತ್ತಿದ್ದು, ಮುಂಬರುವ ಆಸ್ಟ್ರೇಲಿಯಾ ಟೆಸ್ಟ್ ಸರಣಿಗೂ ನಾಯಕರಾಗಿ ಮುಂದುವರೆಯಲಿದ್ದಾರೆ.

33 ವರ್ಷದ ಧೋನಿ ಅವರು 2010ರ ಜುಲೈ 4ರಂದು ಸಾಕ್ಷಿಯನ್ನು ವಿವಾಹವಾಗಿದ್ದರು. ಸದ್ಯ ಸಾಕ್ಷಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾಳೆ ಎಂದು ವರದಿಗಳು ಹೇಳುತ್ತಿವೆ.

ಕಳೆದ ಏಪ್ರಿಲ್‌ನಲ್ಲೇ ಸಾಕ್ಷಿ ಗರ್ಭಿಣಿಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಇದಕ್ಕೆ ಪುಷ್ಠಿ ಕೊಡುವಂತಾ ಯಾವುದೇ ವರದಿಗಳು ಇಲ್ಲವಾಗಿತ್ತು. ಈ ಸುದ್ದಿಯನ್ನು ಸ್ವತಃ ಸಾಕ್ಷಿ ಅವರೇ ಸುಳ್ಳು ಸುದ್ದಿ ಎಂದು ಅಲ್ಲಗೆಳೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: 1975ರ ಕರಾಳ ಅಧ್ಯಾಯ ಸ್ಮರಿಸಿದ ಪ್ರಧಾನಿ ಮೋದಿ..!

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ರೆ ಕೇರ್ ಮಾಡಬೇಡಿ: ಲಾಬಿಗಳಿಗೆ ಮಣಿಯಬೇಡಿ- ಡಿಕೆಶಿಗೆ ಹೈಕಮಾಂಡ್ ಖಡಕ್ ವಾರ್ನಿಂಗ್

Passport ಪೌರತ್ವದ ಪ್ರಮಾಣಪತ್ರವಲ್ಲ, Travel document ಅಷ್ಟೇ: MEA ಸ್ಪಷ್ಟನೆ, ಹೊಸ ಚರ್ಚೆಗೆ ನಾಂದಿ..!