ದೇಶ

ಹರಿಯಾಣ ರಸ್ತೆ ಸಾರಿಗೆಗೆ ಹೈಟೆಕ್ ಸ್ಪರ್ಶ

ಹರಿಯಾಣದಲ್ಲಿ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಜಿಪಿಎಸ್ ಸೌಲಭ್ಯ ಕಲ್ಪಿಸುವ ಮೂಲಕ ಹೈಟೆಕ್ ಸಂಚಾರ...

ಗುರ್‌ಗಾಂವ್: ಹರಿಯಾಣದಲ್ಲಿ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಜಿಪಿಎಸ್ ಸೌಲಭ್ಯ ಕಲ್ಪಿಸುವ ಮೂಲಕ ಹೈಟೆಕ್ ಸಂಚಾರ ವ್ಯವಸ್ಥೆಗೆ ನಾಂದಿ ಹಾಡಿದೆ.

ಪ್ರಯಾಣಿಕರಿಗೆ ಬಸ್ ಯಾವ ಮಾರ್ಗದಲ್ಲಿ ಸಂಚರಿಸುತ್ತದೆ, ಗಮ್ಯ ಸ್ಥಾನಗಳು ಸೇರಿದಂತೆ ರಸ್ತೆ ಸಂಚಾರದ ಎಲ್ಲಾ ಮಾಹಿತಿಗಳನ್ನು ನೀಡುವಂತ ಆ್ಯಪ್‌ನ್ನು ಹರಿಯಾಣ ರಸ್ತೆ ಸಾರಿಗೆ ಸಂಸ್ಥೆ ಅಭಿವೃದ್ಧಿಗೊಳಿಸಿದೆ.

ತಮ್ಮ ಸ್ಮಾರ್ಟ್ ಫೋನ್‌ಗಳಲ್ಲಿ ಈ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳುವ ಮೂಲಕ ಪ್ರಯಾಣಿಕರು ಇದರ ಲಾಭ ಪಡೆದುಕೊಳ್ಳಬಹುದು. ಬಸ್ಸ್‌ನ ಸಮಯ, ಪ್ರತಿ ನಿಲ್ಧಾಣಗಳ ಹೆಸರು, ಯಾವ ಮಾರ್ಗ, ಎಷ್ಟು ಕಿ.ಮೀ ಸೇರಿದಂತೆ ಇತರೆ ಮಾಹಿತಿ ಇಲ್ಲಿ ಲಭ್ಯ.

ಒಟ್ಟು 120 ಬಸ್‌ಗಳಲ್ಲಿ ಜಿಪಿಎಸ್ ಸೌಲಭ್ಯ ಅಳವಡಿಸಲಾಗಿದೆ. ಇದಲ್ಲದೇ, ಬಸ್ ಚಾಲಕ ಅಥವಾ ಕಂಡೆಕ್ಟರ್ ಅಸಭ್ಯವಾಗಿ ವರ್ತಿಸಿದರೆ ಅವರ ವಿರುದ್ಧ ಹರಿಯಾಣದ ಸಾರಿಗೆ ಸಂಸ್ಥೆಗೆ ಈ ಆ್ಯಪ್ ಮೂಲಕ ನೇರವಾಗಿ ದೂರಿನ ಸಂದೇಶದ ಕಳುಹಿಸುವ ವ್ಯವಸ್ಥೆ ಕಲ್ಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!