ಸಂತಾನಹರಣ ಶಸ್ತ್ರಕ್ರಿಯಾ ಶಿಬಿರ 
ದೇಶ

ಛತ್ತೀಸ್‌ಗಡ ಶಸ್ತ್ರಚಿಕಿತ್ಸೆ ಅವಘಡ: ತುಕ್ಕು ಹಿಡಿದ ಉಪಕರಣ ಬಳಸಿದ ವೈದ್ಯರು

ಸಂತಾನಹರಣ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಶಸ್ತ್ರಕ್ರಿಯೆ ಮಾಡಿದ್ದ...

ಛತ್ತೀಸ್‌ಗಡ: ಸಂತಾನಹರಣ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಶಸ್ತ್ರಕ್ರಿಯೆ ಮಾಡಿದ್ದ ಅಲ್ಲಿನ ವೈದ್ಯರು ತುಕ್ಕು ಹಿಡಿದ ಉಪಕರಣಗಳನ್ನು ಬಳಸಿದ್ದರು ಎಂಬ ವಿಷಯ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಮಹಿಳೆಯರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ, ಆದರೆ ಪ್ರಕರಣಕ್ಕೆ ವೈದ್ಯರು ಬಳಸಿರುವ ಔಷಧಿ ಹಾಗೂ ತುಕ್ಕು ಹಿಡಿದ ಉಪಕರಣಗಳೇ ಕಾರಣವಾಗಿರಬಹುದು ಎಂದು ಹಿರಿಯ ಅಧಿಕಾರಿ ಸಿದ್ಧಾರ್ಥ್ ಕೋಮಲ್ ಸಿಂಗ್ ಹೇಳಿದ್ದಾರೆ.

ಜನಸಂಖ್ಯಾ ಸ್ಫೋಟ ನಿಯಂತ್ರಿಸುವ ಸಲುವಾಗಿ ಬಿಲಾಸ್ ಪುರದಲ್ಲಿ ಛತ್ತೀಸ್‌ಘಡದ ಸರ್ಕಾರ ಸಂತಾನಹರಣ ಶಸ್ತ್ರಚಿಕಿತ್ಸಾ ಶಿಬಿರವನ್ನು ಏರ್ಪಡಿಸಿತ್ತು. ಶಿಬಿರದಲ್ಲಿ ಡಾ.ಆರ್.ಕೆ. ಗುಪ್ತಾ ಸೇರಿದಂತೆ ಅವರ ಇಬ್ಬರು ಸಹಾಯಕ ಸಿಬ್ಬಂದಿಗಳು ಸೇರಿ ಕೇವಲ ಕೆಲವು ಘಂಟೆಗಳಲ್ಲಿ ಸುಮಾರು 80 ಮಹಿಳೆಯರಿಗೆ ಸಂತಾನಹರಣ ಶಸ್ತ್ರಕ್ರಿಯೆ ನಡೆಸಿದ್ದರು. ಶಸ್ತ್ರಚಿಕಿತ್ಸೆ ನಂತರ 11 ಮಂದಿ ಮಹಿಳೆಯರು ಸಾವನ್ನಪ್ಪಿದ್ದರಲ್ಲದೇ 49 ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ 20 ಮಹಿಳೆಯರ ಸ್ಥಿತಿ ಇಂದಿಗೂ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ