ಬಿಲಾಸ್‌ಪುರ: ಸಂತಾನ ಹರಣ ಶಸ್ತ್ರಚಿಕಿತ್ಸೆ ನಡೆಸಿ ಮಹಿಳೆಯರ ಸಾವಿಗೆ ಕಾರಣರಾದ ವೈದ್ಯನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಸುಮಾರು 83 ಮಹಿಳೆಯರಿಗೆ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸಿ, 13 ಮಹಿಳೆಯರ ಸಾವಿಗೆ ಕಾರಣರಾದ ವೈದ್ಯನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ರಾತ್ರಿ ಬೋಲಾದ ಬಜಾರ್‌ನಲ್ಲಿ ಲ್ಯಾಪರೋಸ್ಕೋಪಿಕ್ ಸರ್ಜನ್ ಡಾ. ಆರ್.ಕೆ ಗುಪ್ತಾ ಅವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಚತ್ತೀಸ್‌ಗಡ್‌ನ ಬಿಲಾಸ್‌ಪುರದಲ್ಲಿ ಕಳೆದ ಶನಿವಾರ ಸರ್ಕಾರ ಆಯೋಜಿಸಿದ್ದ ಕುಟುಂಬ ನಿಯಂತ್ರಣ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ, ಶಸ್ತ್ರಚಿಕಿತ್ಸೆಯ ನಂತರ 13 ಮಹಿಳೆಯರು ಸಾವನ್ನಪ್ಪಿದ್ದರು. ಬಿಲಾಸ್ ಪುರದಲ್ಲಿ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಈ ಶಿಬಿರದಲ್ಲಿ 80ಕ್ಕೂ ಹೆಚ್ಚು ಮಹಿಳೆಯರು ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು.