ಸಾಂದರ್ಭಿಕ ಚಿತ್ರ 
ದೇಶ

ಮೊರಾದಾಬಾದ್‌ನಲ್ಲಿ ವ್ಯಾನ್‌ಗೆ ಟ್ರಕ್ ಡಿಕ್ಕಿ: 12 ಸಾವು, 4 ಗಾಯ

ಮೊರಾದಾಬಾದ್: ಉತ್ತರಪ್ರದೇಶದ ದಿಂಗಾರ್‌ಪುರ್-ಕುಂಡಾರ್ಕಿ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ವ್ಯಾನ್‌ಗೆ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 10 ಮಹಿಳೆಯರು ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದಾರೆ.

ಹೆಚ್ಚಾಗಿ ಮಹಿಳೆಯರೇ ಪ್ರಯಾಣಿಸುತ್ತಿದ್ದ ವ್ಯಾನೊಂದು ಇಂದು ಬೆಳಗ್ಗೆ ದಿಂಗಾರ್‌ಪುರ್ ಕುಂಡಾರ್ಕಿಯಲ್ಲಿ ಟ್ರಕ್‌ವೊಂದಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ 12 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  

ಮೊರಾದಾಬಾದ್‌ನ ಬಡುರೈನಿಂದ ಬರೇಲಿಯಲ್ಲಿ ನಡೆಯುತ್ತಿದ್ದ ಸತ್ಸಂಗ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದು, ಮೃತರಲ್ಲಿ ಹೆಚ್ಚಿನವರು 30 ರಿಂದ 35 ವರ್ಷ ಪ್ರಾಯದ ಮಹಿಳೆಯರೇ ಆಗಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿದ್ದ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದರೆ.

ಅಪಘಾತ ಸಂಭವಿಸುತ್ತಿದ್ದಂತೆ ಅವಘಡಕ್ಕೆ ಕಾರಣವಾದ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನನ್ನು ಕೂಡಲೇ ಬಂದಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bangladesh ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು, ತನಿಖೆ ಆರಂಭ

Operation Sindoorಗೆ ಪಾಕಿಸ್ತಾನ ತಿರುಗೇಟು; ಭಾರತದ 2 ವಾಯುನೆಲೆ ಧ್ವಂಸ ಅಂತೆ..! ಆದ್ರೆ ಅದು ಅಸ್ತಿತ್ವದಲ್ಲೇ ಇಲ್ಲ..!

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

SCROLL FOR NEXT