ನೆಲ್ಲೂರು: ಸಂಸದರ ಆದರ್ಶ ಗ್ರಾಮ ಯೋಜನೆಯಡಿ ದತ್ತು ಪಡೆದಿದ್ದ ಆಂಧ್ರಪ್ರದೇಶದ ಗ್ರಾಮಕ್ಕೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಭಾನುವಾರ ಭೇಟಿ ನೀಡಿದ್ದಾರೆ.
ಆಂಧ್ರದ ನೆಲ್ಲೂರು ಜಿಲ್ಲೆಯ ಪುಟ್ಟಂರಾಜು ಕಂಡ್ರಿಗ ಗ್ರಾಮವನ್ನು ಸಚಿನ್ ತೆಂಡೂಲ್ಕರ್ ದತ್ತು ಪಡೆದಿದ್ದರು. ಇದೇ ಮೊದಲ ಬಾರಿಗೆ ಗ್ರಾಮಕ್ಕೆ ಭೇಟಿ ನೀಡಿರುವ ಸಚಿನ್, ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಗ್ರಾಮದ ಅಭಿವೃದ್ಧಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿರಿಸುವ ಸಚಿನ್, ಗ್ರಾಮದ ಬಗ್ಗೆ ಪೂರ್ಣವಾಗಿ ಮಾಹಿತಿ ನೀಡಲು ವಿಶೇಷ ತಂಡವನ್ನು ರಚಿಸಿದ್ದಾರೆ. ಈ ತಂಡ ಗ್ರಾಮಕ್ಕೆ ಆಗ್ಗಾಗೆ ಭೇಟಿ ನೀಡಲಿದ್ದು, ಅಲ್ಲಿನ ಕುಂದು ಕೊರತೆಗಳ ಬಗ್ಗೆ ಸಚಿನ್‌ಗೆ ಮಾಹಿತಿ ನೀಡಲಿದೆ. ಅಲ್ಲದೇ, ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸುವುದರ ಬಗ್ಗೆ ಕೆಲಸ ಮಾಡಲಿದೆ ಎಂದು ತಿಳಿದು ಬಂದಿದೆ.