ಮರಕ್ಕೆ ಕಾರು ಡಿಕ್ಕಿ 
ದೇಶ

ಮರಕ್ಕೆ ಕಾರು ಡಿಕ್ಕಿ: 3 ಸಾವು

ಹೊಸದುರ್ಗ: ಸಿದ್ದರಾಮೇಶ್ವರ ದೇವರ ದರ್ಶನ ಪಡೆದು ವಾಪಸಾಗುತ್ತಿದ್ದಾಗ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿತ್ರದುರ್ಗದಲ್ಲಿ ಸಂಭವಿಸಿದೆ.

ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಬೇಗೂರು ಮನೆತನದ ಮಂಜುಳಾ(40) ಮತ್ತು ಮಹದೇವಮ್ಮ(60) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತು ಮೂವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ತಾಲೂಕಿನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿದ್ದರಾಮೇಶ್ವರ ದೇವಾಲಯಕ್ಕೆ ತೆರಳಿದ್ದ ಹೊಸಮನೆಬೇಗೂರು ಮನೆತನದವರು ದೇವರ ದರ್ಶನ ಪಡೆದ ಹುಳಿಯಾರಿನಿಂದ ಭದ್ರಾವತಿಗೆ ವಾಪಸಾಗುತ್ತಿದ್ದರು. ಈ ವೇಳೆ ಚಿತ್ರದುರ್ಗದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಹೊಸದುರ್ಗ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel