ನವದೆಹಲಿ: ಎಬೊಲಾ ವೈರಸ್ ಬಗ್ಗೆ ಆತಂಕ ಬೇಡ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.
ದೇಶದಲ್ಲಿ ಮೊದಲ ಎಬೊಲಾ ಪ್ರಕರಣ ಪತ್ತೆಯಾಗುತ್ತಿದ್ದಂತೆ, ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಎಬೊಲಾ ವೈರಸ್‌ನ್ನು ಹತ್ತಿಕ್ಕಲು ಕ್ರಮಕೈಗೊಳ್ಳಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಆರೋಗ್ಯ ಸಚಿವ ಜೆ.ಪಿ ನಡ್ಡಾ ಹೇಳಿದ್ದಾರೆ.
ದೇಶದ ಜನತೆ ಎಬೊಲಾ ವೈರಸ್ ಬಗ್ಗೆ ಆತಂಕ ಪಡಬೇಕಾಗಿಲ್ಲ, ಎಬೊಲಾ ವೈರಸ್ ಪತ್ತೆಯಾದ ಲೈಬೀರಿಯಾದಿಂದ ವಾಪಾಸ್ಸಾದ ಭಾರತೀಯ ವ್ಯಕ್ತಿಯನ್ನು ದೆಹಲಿ ಏರ್‌ಪೋರ್ಟ್‌ನ ವಿಶೇಷ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಹಾಗಾಗಿ, ಜನತೆ ಆತಂಕ ಪಡಬೇಕಿಲ್ಲ ಎಂದು ಅವರು ತಿಳಿಸಿದ್ದಾರೆ.