ಬಿಜಿಂಗ್: ಚೀನಾದ ಪಶ್ಚಿಮ ಭಾಗದಲ್ಲಿ ಶನಿವಾರ ಸಂಜೆ ಸಂಭವಿಸಿದ ಭೂಕಂಪನದಲ್ಲಿ ನಾಲ್ವರು ಸಾವನ್ನಪ್ಪಿದ್ದು, 54 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿವೆ.
ರಿಕ್ಟರ್ ಮಾಪಕದಲ್ಲಿ 6.6ರಷ್ಟು ತೀವ್ರತೆಯ ಕಂಪನ ದಾಖಲಾಗಿದ್ದು, ನಿನ್ನೆ ಸಂಜೆ ಸುಮಾರು 4.55ರ ಸಮಯದಲ್ಲಿ ಭೂಕಂಪಿಸಿದೆ.
ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 56 ಜನರು ಗಾಯಗೊಂಡಿದ್ದಾರೆ. 55,000 ಮನೆಗಳು ಹಾನಿಗೀಡಾಗಿದ್ದು, 30 ಮನೆಗಳು ಧ್ವಂಸಗೊಂಡಿವೆ ಎಂದು ವರದಿ ತಿಳಿಸಿದೆ.