ಮುಲಾಯಂ ಸಿಂಗ್ ಯಾದವ್ 
ದೇಶ

ಅಖಿಲೇಶ್ ಸರ್ಕಾರದ ವಿರುದ್ಧ ಮುಲಾಯಂ ವಾಗ್ದಾಳಿ

ಲಖನೌ: ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳು ಜಾರಿಯಾಗುತ್ತಿದೆ. ಆದರೆ ಅನುಷ್ಠಾನ ಮಾತ್ರ ಮಂದಗತಿಯಲ್ಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಿನ್ನೆಯಷ್ಟೇ ತಮ್ಮ 75ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರು ಆಚರಿಸಿಕೊಂಡಿದ್ದರು. ಇಂದು ಲಖನೌನಲ್ಲಿ ಲಖನೌ-ಆಗ್ರಾ ಎಕ್ಸ್‌ಪ್ರೆಸ್ ವೇ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಅವರು, ಅಭಿವೃದ್ಧಿಗೆ ಸಂಬಂಧಿಸಿದಂತೆ ತಮ್ಮ ಪುತ್ರ ಅಖಿಲೇಶ್ ಯಾದವ್ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ರಾಜ್ಯದಲ್ಲಿ ಸರ್ಕಾರ ಸರಿಯಾಗಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯದ ಅಭಿವೃದ್ಧಿ ದೃಷ್ಠಿಯಿಂದ ಹಲವು ಯೋಜನಗಳು ಜಾರಿಯಾಗಿವೆ. ಆದರೆ ಅನುಷ್ಠಾನ ಮಾತ್ರ ಮಂದಗತಿಯಲ್ಲಿದೆ. ಹಲವು ಯೋಜನೆಗಳಿಗೆ ಶಿಲಾನ್ಯಾಸ ಮಾಡುತ್ತೀರಾ. ಆದರೆ ಪೂರ್ಣಗೊಳಿಸುವಲ್ಲಿ ವಿಳಂಬ ಮಾಡುತ್ತೀರಾ. ಕಾಮಗಾರಿ ಪೂರ್ಣಗೊಳಿಸಿದರೂ ಅವು ಉದ್ಘಾಟನಾ ಭಾಗ್ಯವನ್ನು ಕಾಣುತ್ತಿಲ್ಲ ಎಂದು ಕಿಡಿ ಕಾರಿದ್ದಾರೆ.

ಮುಖ್ಯಮಂತ್ರಿ ಅಖಿಲೇಶ್ ಸರ್ಕಾರದ ಬಗ್ಗೆ ಎಲ್ಲೆಡೆಯಿಂದ ಟೀಕೆಗಳನ್ನು ವ್ಯಕ್ತವಾಗುತ್ತಿದ್ದರುವ ಸಂದರ್ಭದಲ್ಲಿ ಸ್ವತಃ ತಂದೆ ಕೂಡ ಮಗನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.



Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ